ಪರೀಕ್ಷೆ ಎದುರಿಸುವ ಸಾಮರ್ಥ್ಯ ಬೆಳೆಸಿ: ಖೊದ್ನಾಪೂರ
Develop the ability to face exams: Khodnapur
ವಿಜಯಪುರ 08: ಇಂದಿನ ಸ್ಪರ್ಧಾತ್ಮಕ ಪೈಪೋಟಿ ಯುಗದಲ್ಲಿ ವಿದ್ಯಾರ್ಥಿಗಳು ವಿಷಯ ಜ್ಞಾನ ಪಡೆಯುವುದರ ಜತೆಗೆ ವಿಷಯವನ್ನು ಪುನರ್ಮನನ ಹಾಗೂ ಪರೀಕ್ಷೆಗೆ ಸಿದ್ದಗೊಳಿಸಲು ಪ್ರಾಯೋಗಿಕ ಮತ್ತು ಸಮಸ್ಯಾಧಾರಿತ ವಿಷಯಗಳಲ್ಲಿ ಹಿಂದಿನ ವರ್ಷಗಳ ಪ್ರಶ್ನೆಪತ್ರಿಕೆಗಳನ್ನು ಬಿಡಿಸಬೇಕು, ಪರೀಕ್ಷೆ ಎದುರಿಸುವ ಸಾಮರ್ಥ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಪ್ರತಿ ವಿಷಯದಲ್ಲಿ ಪ್ರಶ್ನೆಪತ್ರಿಕೆ ಕಾರ್ಯಾಗಾರಗಳನ್ನು ಆಯೋಜಿಸುವುದು ಇಂದಿನ ಅಗತ್ಯತೆಯಾಗಿದೆ. ಇಂತಹ ಕಾರ್ಯಾಗಾರಗಳಿಂದ ವಿಷಯ ಪರಿಣತರಿಂದ ವಿದ್ಯಾರ್ಥಿಗಳಲ್ಲಿ ಪಠ್ಯಕ್ರಮಕ್ಕನುಗುಣವಾಗಿ ಅಧ್ಯಯನಶೀಲರನ್ನಾಗಿಸಲು ಮತ್ತು ಪರೀಕ್ಷೆಯಲ್ಲಿ ಪ್ರಶ್ನೆಗಳು ಹೇಗೆ ಬರಬಹುದು, ಸಮಸ್ಯೆಗಳನ್ನು ಹೇಗೆ ಬಿಡಿಸಬೇಕು ಮತ್ತು ಪರೀಕ್ಷಾ ಫಲಿತಾಂಶದಲ್ಲಿ ಅಗತ್ಯ ಸುಧಾರಣೆಯನ್ನು ತರಲು ಅನುಕೂಲವಾಗುತ್ತದೆ ಎಂದು ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು. ಅವರು ನಗರದ ನವಭಾಗದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಿಂದ ಬಿ.ಕಾಂ ಪ್ರಥಮ ಸೆಮೆಸ್ಟರ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಲೆಕ್ಕಶಾಸ್ತ್ರ ವಿಷಯದ ಪ್ರಶ್ನೆಪತ್ರಿಕೆ ಕಾರ್ಯಾಗಾರದಲ್ಲಿ ಅವರು ಮಾತನಾಡುತ್ತಿದ್ದರು.
ಅವರು ಮಾತನಾಡುತ್ತಾ, ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಮತ್ತು ಫಲಿತಾಂಶದಲ್ಲಿ ಗಣನೀಯ ಸುಧಾರಣೆಯನ್ನು ತರಲು ಈ ತರಹದ ಪ್ರಶ್ನೆಪತ್ರಿಕೆ ಕಾರ್ಯಾಗಾರಗಳನ್ನು ಆಯೋಜಿಸುತ್ತಿರುವದು ಪ್ರಶಂಸನೀಯ ಸಂಗತಿ. ಕಲಿಕೆಯಲ್ಲಿ ಹಿಂದುಳಿದ ಮತ್ತು ಕಡಿಮೆ ಕಲಿಕಾ ಸಾಮರ್ಥ್ಯ ಹೊಂದಿರುವ ಹಾಗೂ ಪ್ರಶ್ನೆಪತ್ರಿಕೆ ಕಾರ್ಯಾಗಾರವನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಪ್ರಯೋಜನಕಾರಿಯಾಗಿದೆ. ಪರೀಕ್ಷೆಗಳ ಪಠ್ಯಕ್ರಮಕ್ಕನುಗುಣವಾಗಿ ಅಧ್ಯಯನ ಸಾಮಗ್ರಿಯನ್ನು ಪಡೆದುಕೊಂಡು ಹಿಂದಿನ ವರ್ಷಗಳ ಪ್ರಶ್ನೆಪತ್ರಿಕೆಗಳನ್ನು ಬಿಡಿಸುವುದು ಮತ್ತು ಓದಿದ ವಿಷಯಗಳ ಬಗೆಗೆ ಗುಂಪು ಚರ್ಚೆಗಳನ್ನು ಕೈಕೊಳ್ಳಬೇಕು ಅಂದಾಗ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶ ಗಳಿಸಬಹುದು ಎಂದು ಕಿವಿಮಾತು ಹೇಳಿದರು. ಈ ಕಾರ್ಯಾಗಾರದಲ್ಲಿ ಕಾಲೇಜಿನ ಬಿ.ಕಾಂ ಪ್ರಥಮ ಸೆಮೆಸ್ಟರ್‌ನ ಸುದೀಪ ದಾನಪ್ಪಗೋಳ ಸ್ವಾಗತಿಸಿದರು. ಸಂಗಮೇಶ ಗುಡ್ಡದ ವಂದಿಸಿದರು. ಅಂಬಿಕಾ ಕುಂಬಾರ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 