ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ
Developed Agriculture Sankalpa Abhiyan Program
ಗದಗ 09: 2025-26 ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಐ.ಸಿ.ಎ.ಆರ್-ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಕರ್ನಾಟಕ ರಾಜ್ಯ ಕೃಷಿ ಇಲಾಖೆ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ದಿನಾಂಕ 29 ರಿಂದ 12 ರ ವರೆಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಕೃಷಿ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದೆ.
09 ರಂದು ಹನ್ನೆರಡನೇಯ ದಿನ ಗದಗ ತಾಲೂಕಿನ ಸೊರಟೂರು, ಯಲಿಶಿರೂರ, ಕಣವಿ ಹೊಸೂರು, ಕದಡಿ, ಬಳಗಾನೂರು, ಹೊಂಬಳ ಗ್ರಾಮಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿತ್ತು. ಭಾರತೀಯ ದ್ವಿದಳ ಧಾನ್ಯಗಳ ಸಂಶೋಧನಾ ಸಂಸ್ಥೆ, ಧಾರವಾಡದ ವಿಜ್ಞಾನಿಗಳು, ಕರ್ನಾಟಕ ಸರಕಾರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಆತ್ಮ ಸಿಬ್ಬಂದಿ, ಕೃಷಿ ಸಖಿಯರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳು, ಪಶು ಸಖಿಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ರೈತ ಮುಖಂಡರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಈ ಅಭಿಯಾನದಲ್ಲಿ ವಿವಿಧ ತಂತ್ರಜ್ಞಾನಗಳಾದ ಬೀಜೋಪಚಾರ, ಸುಧಾರಿತ ತಳಿಗಳು, ತೋಟಗಾರಿಕೆ ಬೆಳೆಗಳು, ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿಗಳ ತರಬೇತಿ ನೀಡಲಾಯಿತು. ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಮುಂಗಾರು ಹಂಗಾಮಿನ ಅಡಿ ಅಭಿವೃದ್ಧಿ ಪಡಿಸಿದ ಮುಂಗಾರು ಬೆಳೆಗಳಾದ ಹೆಸರು, ಶೇಂಗಾ, ಸೂರ್ಯಕಾಂತಿ, ಗೋವಿನ ಜೋಳ, ಈರುಳ್ಳಿ ಬೆಳೆಗಳ ಕುರಿತ ಕೃಷಿ ಕೈಪಿಡಿಯನ್ನು ರೈತರಿಗೆ ನೀಡಲಾಯಿತು. ಜೊತೆಗೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳ ಬಗ್ಗೆ ಹಸ್ತಪ್ರತಿಗಳನ್ನು ವಿತರಿಸಲಾಯಿತು. ಗದಗ ತಾಲೂಕಿನ 1074 ಜನ ರೈತ ಹಾಗೂ ರೈತ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 