ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತ ಆಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Development has not been hampered by guarantee schemes: Chief Minister Siddaramaiah
ಹಾಸನ 26: ಎತ್ತಿನಹೊಳೆ ಯೋಜನೆ ಕುಡಿಯುವ ನೀರಿನ ಯೋಜನೆಯಾಗಿದ್ದು, 24ಟಿಎಂಸಿ ನೀರು ಬೇಕು. 14 ಟಿಎಂಸಿ ಕುಡಿಯುವುದಕ್ಕೆ, 10 ಟಿಎಂಸಿ ಕೆರೆ ತುಂಬಿಸುವುದಕ್ಕೆ ಬೇಕು. ಈ ಯೋಜನೆಯನ್ನು ಪೂರ್ಣಗೊಳಿಸಿ, ಕುಡಿಯುವ ನೀರು ಮತ್ತು 527 ಕೆರೆಗಳನ್ನು ತುಂಬಿಸುವ ಕೆಲಸವನ್ನು ಮಾಡಿಯೇ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಎತ್ತಿನಹೊಳೆ ಯೋಜನೆ ಮಾಡಲು ಸಾಧ್ಯವೇ ಇಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿದ್ದರು. ಇದುವರೆಗೆ 17 ಸಾವಿರ ಕೋಟಿ ಖರ್ಚು ಮಾಡಿದ್ದು, ಮೊದಲ ಹಂತದ ಕೆಲಸ ಮುಗಿದಿದೆ. ಎರಡನೇ ಹಂತದ ಕೆಲಸ ಆರಂಭವಾಗಿದೆ. ಇನ್ನೂ 6 ಸಾವಿರ ಕೋಟಿ ಬೇಕಿದೆ. ಇನ್ನು ಎರಡು ವರ್ಷಗಳಲ್ಲಿ ಯೋಜನೆ ಸಂಪೂರ್ಣವಾಗಿ ಮುಗಿಸಿ, ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಕೊಡುತ್ತೇವೆ ಎಂದು ಹೇಳಿದರು.
ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತ ಆಗಿಲ್ಲ, ಆಗುವುದೂ ಇಲ್ಲ. ಇಡೀ ದೇಶದಲ್ಲಿಯೇ ತಲಾ ಆದಾಯ ಹೆಚ್ಚಾಗಿದ್ದರೆ, ಅದು ಕರ್ನಾಟಕದಲ್ಲಿ ಮಾತ್ರ. ತಲಾ ಆದಾಯದಲ್ಲಿ ನಾವೇ ನಂಬರ್ ವನ್. ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಿಲ್ಲ. ತಲಾ ಆದಾಯ ಹೆಚ್ಚಳವಾಗಲು, ಗ್ಯಾರಂಟಿ ಯೋಜನೆಗಳೇ ಕಾರಣ.
ಗ್ಯಾರಂಟಿಗಳ ನಂತರ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದ್ದು, ಸರ್ಕಾರದ ಆದಾಯ ಹೆಚ್ಚಾಗಿದೆ. ಇದರಿಂದ ತಲಾ ಆದಾಯ ಹೆಚ್ಚಾಗಿದೆ. ಅಭಿವೃದ್ಧಿಗೆ ಹಣ ಇಲ್ಲದೇ ಹೋಗಿದ್ದರೆ, ತಲಾ ಆದಾಯದಲ್ಲಿ ನಂಬರ್ ವನ್ ಆಗಲು ಆಗುತ್ತಿರಲಿಲ್ಲ. ಬಿಜೆಪಿಯವರು ಹೇಳುವ ಮಾತುಗಳು ಶುದ್ಧ ಸುಳ್ಳು. ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಸರ್ಕಾರವಿದ್ದರೆ, ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಗ್ಯಾರಂಟಿ ಯೋಜನೆಗಳಿಗೆ ₹52
ಸಾವಿರ ಕೋಟಿ ಖರ್ಚು ಮಾಡುತ್ತಿದ್ದೇವೆ. ₹1.20
ಲಕ್ಷ ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಖರ್ಚು ಮಾಡುತ್ತಿದ್ದೇವೆ ಎಂದರು.
2013–2018 ರವರೆಗೆ 165 ಭರವಸೆಗಳಲ್ಲಿ, 158 ಭರವಸೆಗಳನ್ನು ಈಡೇರಿಸಿದ್ದೇವು. ಬಿಜೆಪಿಯವರು 600 ರಲ್ಲಿ, ಶೇ 10 ರಷ್ಟೂ ಈಡೇರಿಸಿಲ್ಲ. ಇಂಥವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರು ಯಾವತ್ತೂ ಜನರ ಆಶೀರ್ವಾದ ಪಡೆದು, ಅಧಿಕಾರಕ್ಕೆ ಬಂದಿಲ್ಲ. ಹಿಂಬಾಗಿಲಿನಿಂದ ಅಧಿಕಾರ ಹಿಡಿದು, ರಾಜ್ಯವನ್ನು ಲೂಟಿ ಮಾಡಿದರು. ಅದಕ್ಕಾಗಿ 2023 ರಲ್ಲಿ ಸೋಲುವಂತಾಯಿತು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 