ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ :ಬಾಬಾಸಾಹೇಬ ಪಾಟೀಲ
Development is possible only through education: Babasaheb Patil
ನೇಸರಗಿ 02: ಜೀವನದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಸವಲತ್ತು ಪಡೆದು ಮುಂದೆ ಬಂದರೆ ಅವರು ಜೀವನದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ, ಅದೇ ರೀತಿ ಸರ್ಕಾರಿ ಶಾಲೆಗಳಲ್ಲಿ, ಕಾಲೇಜುಗಳಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ, ಶಾಲಾ ಕಟ್ಟಡ, ಡಿಜಿಟಲ್ ಶಿಕ್ಷಣ, ಸಾಂಸ್ಕೃತಿಕ, ಕ್ರೀಡೆಗಳಲ್ಲಿ ಪಾಲ್ಗೊಂಡು ಸರ್ಕಾರಿ ಶಾಲೆ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿ ವಿದ್ಯಾರ್ಥಿಗಳು ಮುಂದೆ ಬರಬೇಕು ಎಂದು ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಅವರು ಗ್ರಾಮದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕರ್ನಾಟಕ ಸರ್ಕಾರ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು ಇದರ 2024-25 ನೇ ಸಾಲಿನ ಸಾಮಾನ್ಯ ಯೋಜನೆಯಡಿಯಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರು ಮತಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೇಸರಗಿ ಇದಕ್ಕೆ ಹೆಚ್ಚುವರಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ 2 ಕೋಟಿ ರೂಪಾಯಿಗಳ ಅನುಧಾನದಲ್ಲಿ ಕಾಮಗಾರಿಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿ ಇಲ್ಲಿನ ಕಾಲೇಜು ವಿದ್ಯಾರ್ಥಿನಿಯರಿಗೆ ಕಾಡಿಸುವ ಪೋಲಿ ಹುಡುಗರು ಇನ್ನೂ ಮುಂದೆ ಜಾಗ್ರತೆಯಿಂದ ಇರಬೇಕು ಇಲ್ಲದಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವದು ಎಂದರು.
ಯುವ ಮುಖಂಡ ಸಚಿನ ಪಾಟೀಲ, ಕಾಲೇಜು ಸುಧಾರಣಾ ಸಮಿತಿ ಉಪಾಧ್ಯಕ್ಷ ಅಡಿವಪ್ಪ ಮಾಳಣ್ಣವರ, ಬಾಳಪ್ಪ ಮಾಳಗಿ, ಡಿಗ್ರಿ ಕಾಲೇಜು ಪ್ರಾಂಶುಪಾಲ ಡಾ. ಫಕ್ಕಿರಗೌಡ ಗದ್ದಿಗೌಡರ, ನಿಂಗಪ್ಪ ತಳವಾರ, ಬಸವರಾಜ ಚಿಕ್ಕನಗೌಡರ, ನಜೀರ್ ಅಹಮ್ಮದ ತಹಶೀಲ್ದಾರ, ಮಲ್ಲಿಕಾರ್ಜುನ ಕಲ್ಲೋಳಿ, ವಾಸು ಹಮ್ಮಣ್ಣವರ, ಸುಜಾತ ತುಬಾಕಿ, ವಿನಾಯಕ ಮಾಸ್ತಮರಡಿ, ಸುರೇಶ ಲೆಂಕನಟ್ಟಿ, ಬಾಬು ಭಾಗವಾನ, ಪುಂಡಲೀಕ ಹಮ್ಮನವರ, ಮಕಬುಲ್ ಬೇಫಾರಿ, ಶೇಖರ ಕೊಮ್ಮಣ್ಣವರ, ವಿನಾಯಕ ಅಗಸಿಮನಿ ಸೇರಿದಂತೆ ಎಲ್ಲ ಸಮಾಜದ ಮುಖಂಡರು, ಕಾಲೇಜು ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 