ಕೆರೆ-ಕಟ್ಟೆಗಳನ್ನು ಅಭಿವೃದ್ಧಿಪಡಿಸುವುದು ಅತೀ ಅವಶ್ಯಕ: ಮುದುಕಮ್ಮನವರ
ಲೋಕದರ್ಶನವರದಿ
ಹಾವೇರಿ೧೫: ಜಲಾಮೃತ ಕಾಮಗಾರಿಗಳಿಗೆ ಆದ್ಯತೆ ನೀಡಿ ಗ್ರಾಮೀಣ ಪ್ರದೇಶದಲ್ಲಿ ವಲಸೆ ತಪ್ಪಿಸಿಲು ತಾಲೂಕಿನಲ್ಲಿ ನೀರಿನ ಮೂಲಗಳನ್ನು ಉಳಿಸಿಕೊಳ್ಳುವುದು ಕೆರೆ-ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ನೀರು ನಿಲ್ಲುವಂತೆ ಮಾಡುವುದು ಅತೀ ಅವಶ್ಯಕವಾಗಿದೆ. ಹೀಗಾಗಿ ಈ ವರ್ಷ ತಾಲೂಕಿನಲ್ಲಿ ನೈಸಗರ್ಿಕ ಜಲ ಸಂರಕ್ಷಣೆಗೆ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಲು ನಿರ್ಧರಿಸಿದ್ದು, ಇದರಿಂದ ಎರಡು ಬಗೆಯ ಪ್ರಯೋಜನ ಆಗಲಿ ಎಂದು ತಾಲೂಕ ಪಂಚಾಯತಿಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ಅನ್ನಪೂರ್ಣ ಮುದುಕಮ್ಮನವರ ಹೇಳಿದರು.
ಕರಜಗಿ ಗ್ರಾಮ ಪಂಚಾಯತಿಯ ಕರಜಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೋಜಗಾರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಯೋಜನೆಯ ಬಗ್ಗೆ ತಾಲೂಕಿನ ಕರಜಗಿ ಗ್ರಾಮ ಪಂಚಾಯತಿಯ ಕರಜಗಿ ರಸ್ತೆಯಲ್ಲಿರುವ ಕೆಂಪಿನ ಕೆರೆಗೆ ಹರಿದು ಬರುವ ನೀರಿಗೆ ಕಚ್ಚಾ ಕಾಲುವೆ ಕಾಮಗಾರಿಯನ್ನು ವಿಕ್ಷೀಸಿದರು.
ಜಲಮೂಲಗಳನ್ನು ಅಭಿವೃದ್ಧಿಪಡಿಸುವುದು ಒಂದಡೆಯಾದರೆ ಮತ್ತೊಂದಡೆ ಹೆಚ್ಚ ಜನರಿಗೆ ಉದ್ಯೋಗ ಖಾತರಿಯಡಿ ಕೂಲಿ ಕೆಲಸ ಕೊಟ್ಟಂತಾಗಲಿದೆ. ಅಲ್ಲದೇ ಕೂಲಿಕಾರರು ಉದ್ಯೋಗಕ್ಕಾಗಿ ಬೇರೆಡೆ ವಲಸೆ ಹೋಗುವುದನ್ನು ತಪ್ಪಿಸಿದಂತಾಗುತ್ತದೆ. ಎಂದರು ಹಾಗೇಯೇ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ದೊರೆಯುವಂತೆ ಮಾಡಲು ತಾಲೂಕ ಪಂಚಾಯತ ಬದ್ಧವಾಗಿ ಇದ್ದು, ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಾಮೂಹಿಕವಾಗಿ ಹೆಚ್ಚು ಕೂಲಿಕಾರರು ಪಾಲಗೋಳ್ಳುವಂತಹ ಕಾಮಗಾರಿಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಮತ್ತು ಈಗಾಗಲೇ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತುವುದು, ಗೋ ಕಟ್ಟೆಗಳ ಅಭಿವೃದ್ಧಿ, ಕೃಷಿ ಹೊಂಡ, ಬದು ನಿಮರ್ಾಣ, ಕಲ್ಯಾಣಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಜಲದ ಮೂಲಗಳು ಕಡಿಯಾಗುತ್ತಿದ್ದು, ಕೆರೆ, ಕಟ್ಟೆಗಳಿಗೆ ಹರಿದು ಬರುವ ನೀರಿನ ಮಾರ್ಗಗಳು ಕಾಲುವೆಗಳ ಹೂಳು ಹಾಗೂ ಗಿಡ ಗಂಟೆಗಳಿಂದ ಮುಚ್ಚಿ ಹೋಗಿವೆ ಇದರಿಂದಾಗಿ ಕೆರೆ-ಕಟ್ಟೆಗಳಲ್ಲಿ ನೀರು ಕಾಣದಾಗಿ ಅಂತರರ್ಜಲ ಮಟ್ಟ ಪಾತಾಳಕ್ಕೆ ಕುಸಿಯುತ್ತಿದೆ ಇದರ ಜೊತೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರು ಉದ್ಯೋಗ ಅರಸಿಕೊಂಡು ನಗರ, ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆ ಈ ಸಂಕಷ್ಟದ ಪರಿಸ್ಥಿತಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉದ್ಯೋಗ ಖಾತರಿ ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ತಾಲೂಕ ಪಂಚಾಯತಿಯ ಮಾಹಿತಿ ಶಿಕ್ಷಣ ಸಂವಹನ ಅಧಿಕಾರಿ ಗಿರೀಶ ಬೆನ್ನೂರ, ಅಭಿವೃಧ್ಧಿ ಅಧಿಕಾರಿಗಳಾದ ಲೋಕೇಶ ಪಟ್ಟಣ, ತಾಲೂಕ ಪಂಚಾಯತಿಯ ಇಂಜಿನಿಯರಾದ ಇಮ್ರಾನಖಾನ್, ಪಂಚಾಯತ ಬಿಎಫ್ಟಿ ಸಂಜಿವ ಮೆಗಳಮನಿ, ಪಂಚಾಯತಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 