ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿ: ಹೊಸ ಕ್ರಿಯಾಯೋಜನೆಗೆ ಸಿದ್ಧತೆ

ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿ: ಹೊಸ ಕ್ರಿಯಾಯೋಜನೆಗೆ ಸಿದ್ಧತೆ Development of mine-affected areas: Preparation for a new action plan

ಬಳ್ಳಾರಿ 02: ಜಿಲ್ಲೆಯಗಣಿ ಬಾಧಿತ ಪ್ರದೇಶಗಳಲ್ಲಿ ಸಮಗ್ರಅಭಿವೃದ್ಧಿ ಕೈಗೊಳ್ಳುವ ನಿಟ್ಟಿನಲ್ಲಿ 2023-24ನೇ ಸಾಲಿನಿಂದಅನ್ವಯವಾಗುವಂತೆ ಹೊಸ ಕ್ರಿಯಾಯೋಜನೆರೂಪಿಸಬೇಕಾಗಿದೆ. ಕಳೆದ ಮೂರು ವರ್ಷಗಳಿಂದ ಯಾವುದೇ ಹೊಸ ಯೋಜನೆಗಳನ್ನು ರೂಪಿಸದಕಾರಣ, ಪ್ರಸ್ತುತ ಸುಮಾರು 950 ಕೋಟಿರೂ.ಕ್ರೋಢೀಕೃತಅನುದಾನ ಲಭ್ಯವಿದ್ದು, ಇದನ್ನು ವಿವಿಧಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರತಿಯೊಂದು ಪ್ರಸ್ತಾವನೆಯನ್ನು ಕೂಲಂಕುಷವಾಗಿ ಪರೀಶೀಲಿಸಬೇಕು.ನಿಯಮಾನುಸಾರ ಪ್ರಸ್ತಾವನೆಗಳನ್ನು ಸಲ್ಲಿಸಬೇಕುಎಂದುಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆಅವರು ಸೂಚಿಸಿದರು. 

ಜಿಲ್ಲಾಖನಿಜ ಪ್ರತಿಷ್ಠಾನದ ವಿಶೇಷ ಕರ್ತವ್ಯಾಧಿಕಾರಿ ಲೋಕೇಶ್‌ಅವರು ಮಾತನಾಡಿ, ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಗಳ ಅನ್ವಯ, ಈ ಯೋಜನೆಯಲ್ಲಿಕುಡಿಯುವ ನೀರು, ಪರಿಸರ ಸಂರಕ್ಷಣೆ, ಆರೋಗ್ಯ ಸೇವೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಯೋವೃದ್ಧರು ಮತ್ತು ವಿಕಲಚೇತನರಕಲ್ಯಾಣ, ಕೌಶಲ್ಯಾಭಿವೃದ್ಧಿ, ಸ್ವಚ್ಛತೆ ಮತ್ತುತ್ಯಾಜ್ಯ ನಿರ್ವಹಣೆ ಹಾಗೂ ಇತರ ಮೂಲಸೌಕರ್ಯ ಯೋಜನೆಗಳು ಒಳಗೊಂಡತೆ ಎಂಟು ಪ್ರಮುಖಆದ್ಯತಾ ಕ್ಷೇತ್ರಗಳ ಮೂಲಭೂತ ಸೌಕರ್ಯಗಳ ಅನುಷ್ಠಾನಕ್ಕೆ ಪ್ರಾಮುಖ್ಯತೆ ನೀಡಲಾಗುವುದುಎಂದು ತಿಳಿಸಿದರು. 

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಎಸ್‌.ನವೀನ್‌ಕುಮಾರ್, ಆಹಾರ, ನಾಗರಿಕ ಸರಬರಾಜು ಮತ್ತುಗ್ರಾಹಕರ ವ್ಯವಹಾರಗಳ ಇಲಾಖೆಯಉಪನಿರ್ದೇಶಕದೇವರಾಜ್‌ಕೆ.ಆರ್‌., ಜಿಪಂ ಮುಖ್ಯ ಲೆಕ್ಕಾಧಿಕಾರಿ ವಿನೋದ್‌ಕುಮಾರ್, ಗ್ರಾಮೀಣಕುಡಿಯುವ ನೀರು ಮತ್ತು ನೈರ್ಮಲ್ಯಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವರ್ಚುವಲ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.