ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ: ಶಾಸಕ ವಿಶ್ವಾಸ ವೈದ್ಯ
Development of the constituency is my first priority: MLA Vishwas Vaidya
ಸವದತ್ತಿ 14 : ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಸದಾ ಬದ್ಧನಾಗಿದ್ದು, ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಸೇವೆಯೇ ನನ್ನ ಮೊದಲ ಆದ್ಯತೆಯಾಗಿದೆ ಎಂದು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಹೇಳಿದರು. ನಗರದ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ನಂತರ ಮಾತನಾಡಿ ನಾನು ಈ ಮಣ್ಣಿನ ಮಗನಾಗಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತೇನೆ. ಕ್ಷೇತ್ರದ ನಾಗರಿಕರು ಯಾವುದೇ ಸಮಸ್ಯೆಗಳಿದ್ದರೂ ಯಾವುದೇ ಮುಜುಗರವಿಲ್ಲದೆ ನೇರವಾಗಿ ನನ್ನನ್ನು ಸಂಪರ್ಕಿಸಬಹುದು.
ನಿಮ್ಮ ಸೇವೆ ಮಾಡಲು ನಾನು ಸದಾ ಸಿದ್ಧನಿದ್ದೇನೆ, ಎಂದು ಭರವಸೆ ನೀಡಿದರು.ಬಡ ಕುಟುಂಬಗಳ ಕಷ್ಟಗಳಿಗೆ ತಕ್ಷಣ ಸ್ಪಂದಿಸಿದ ಅವರು ಏಳಿಗೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಅಲ್ಲದೆ, ಬಡ ಕುಟುಂಬಗಳ ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಅವರಿಗೆ ಬೆಂಬಲ ನೀಡುವ ಭರವಸೆಯನ್ನೂ ನೀಡಿದರು. ಈ ಸಂದರ್ಭದಲ್ಲಿ ಶಿವಾನಂದ ಹೂಗಾರ, ವೀರಭದ್ರ ಪಟ್ಟಣಶೆಟ್ಟಿ, ಪ್ರವೀಣ ರಾಮಪ್ಪನವರ, ಶಿವಕುಮಾರ್ ರಾಠೋಡ್, ಮಲ್ಲು ಜಕಾತಿ, ಜಗದೀಶ್ ಶಿರಸಂಗಿ, ನಿಂಗಪ್ಪ ಹಾದಿಮನಿ, ಸುರೇಶ ತುಪ್ಪದ, ಮಹಮ್ಮದ್ ದೊಡಮನಿ ಸೇರಿದಂತೆ ಅನೇಕ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 