ಗ್ರಾಮಗಳ ಅಭಿವೃದ್ಧಿಯೇ ನನ್ನ ಮೂಲ ಮಂತ್ರ: ಶಾಸಕ ಮನಗೂಳಿ
Development of villages is my main mantra: MLA Managuli
ಲೋಕದರ್ಶನ ವರದಿ
ಸಿಂದಗಿ 26: ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾದಾಗ ಮಾತ್ರ ಕ್ಷೇತ್ರ ಅಭಿವೃದ್ಧಿಯಾಗಲು ಸಾಧ್ಯ. ಗ್ರಾಮಗಳ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು. ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಮುಖ್ಯಮಂತ್ರಿ ಅವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಮಂಜೂರಾದ ನಡೂರ ಲಕ್ಷ್ಮೀ ದೇವಸ್ಥಾನ ಹತ್ತಿರ ಸಮುದಾಯ ನಿರ್ಮಾಣಕ್ಕಾಗಿ ಮಂಜೂರಾದ ರೂ.25 ಲಕ್ಷ ಹಾಗೂ ಆರೋಗ್ಯ ಇಲಾಖೆಯ ಆಯುಷ್ಮಾನ್ ಆರೋಗ್ಯ್ ಮಂದಿರ ಕಟ್ಟಡ ನಿರ್ಮಾಣಕ್ಕಾಗಿ ರೂ.65 ಲಕ್ಷ ಮೊತ್ತದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಕನ್ನೊಳ್ಳಿ ಗ್ರಾಮದ ಬಹುದಿನಗಳ ಬೇಡಿಕೆಯಾಗಿರುವ ಆರೋಗ್ಯ ಕಟ್ಟಡ ಹಾಗೂ ಸಮುದಾಯ ಭವನದ ನಿರ್ಮಾಣ ಕಾಮಗಾರಿ ಇನ್ನು ಕೆಲವೇ ದಿನಗಳಲ್ಲಿ ಪ್ರಾರಂಭಗೊಳ್ಳುತ್ತದೆ. ಹಂತ ಹಂತವಾಗಿ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದ ಅವರು ಭಾರತ ಗ್ರಾಮಗಳ ದೇಶ, ಗ್ರಾಮಗಳ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ ಎಂಬುದು ಮಹಾತ್ಮ ಗಾಂಧೀಜಿಯವರ ನಂಬಿಕೆಯಾಗಿತ್ತು.
ಹೀಗಾಗಿ ಗ್ರಾಮ ಸ್ವರಾಜ್ಯದ ಚಿಂತನೆಯನ್ನು ಅವರು ಸಾರಿದರು. ಗಾಂಧಿ ಕಂಡ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸುವತ್ತ ರಾಜ್ಯ ಸರ್ಕಾರವು ಪರಿಣಾಮಕಾರಿ ಹೆಜ್ಜೆ ಇರಿಸಿದೆ. ಗ್ರಾಮಗಳ ಸಬಲೀಕರಣದಲ್ಲಿ ಕರ್ನಾಟಕವು ದೇಶಕ್ಕೆ ಮಾದರಿಯಾಗಿರುವುದು ಸಿದ್ದರಾಮಯ್ಯನವರ ಸರ್ಕಾರದ ಉತ್ತಮ ಆಡಳಿತ ವೈಖರಿಗೆ ಸಾಕ್ಷಿಯಾಗಿದೆ ಎಂದರು. ಗ್ರಾಮದ ಮುಖಂಡರಾದ ವಿಜುಗೌಡ ಪಾಟೀಲ, ವಿಶ್ವನಾಥ ಪಾಟೀಲ, ದೊಡ್ಡಪ್ಪ ಮಂಗೊಂಡಿ, ಕಂಟೆಪ್ಪಾ ಸಾಹುಕಾರ್ ಕಲ್ಲೂರ್, ಶಿವಶಂಕರ ನಾಗಠಾಣ, ಯಮನಪ್ಪ ಚೌಧರಿ, ದಯಾನಂದ ಕಲ್ಲೂರ್, ರಾಚಪ್ಪ ತಂಬಾಕೆ, ಸಿದ್ದಪ್ಪ ಯಾಳಗಿ, ಮುತ್ತು ಮೂಡಗಿ, ಮಾಜಿ ಜಿ.ಪಂ ಸದಸ್ಯರಾದ ಶಂಕರ ಬಗಲಿ, ಭಾಗಣ್ಣ ನಾಗಠಾಣ, ಮಂಜುನಾಥ ನಾಗಠಾಣ, ಸಿದ್ದಣ್ಣ ಚೌಧರಿ, ಭಾಗಪ್ಪ ಶಿವಣಗಿ, ನಿಂಗಣ್ಣ ನಂದ್ಯಾಳ, ವಿಠ್ಠಲ ಹಡಪದ, ಸೇರಿದಂತೆ ಕಾರ್ಯಕರ್ತರು, ಹಿರಿಯರು, ಸಮಾಜದ ಮುಖಂಡರು ಗ್ರಾಮಸ್ಥರು, ಯುವಕ ಮಿತ್ರರು, ಸ್ಥಳೀಯರು ಇದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 