ಅಭಿವೃದ್ಧಿ ಕಾಮಗಾರಿಗಳೇ ವಿರೋಧಿಗಳಿಗೆ ಉತ್ತರ: ಶಾಸಕ ಯಾಸಿರ್ ಖಾನ್ ಪಠಾಣ್

ಅಭಿವೃದ್ಧಿ ಕಾಮಗಾರಿಗಳೇ ವಿರೋಧಿಗಳಿಗೆ ಉತ್ತರ: ಶಾಸಕ ಯಾಸಿರ್ ಖಾನ್ ಪಠಾಣ್  Development works are the answer to opponents: MLA Yasir Khan Pathan


ಶಿಗ್ಗಾಂವಿ, ಆ. 28: ಅಲ್ಪಾವಧಿಯಲ್ಲಿ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿರುವುದಕ್ಕೆ ವಿರೋಧಿಗಳಲ್ಲಿ ನಡುಕ ಉಂಟಾಗಿದೆ. ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೇ ವಿರೋಧಿಗಳಿಗೆ ತಕ್ಕ ಉತ್ತರ ನೀಡಲಿವೆ ಎಂದು ಶಾಸಕ ಯಾಸಿರ್ ಖಾನ್ ಪಠಾಣ್ ಹೇಳಿದರು.  

ತಾಲೂಕಿನ ಹುಲಗೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಹುಲಗೂರು ಗ್ರಾಮವನ್ನು ಸರ್ವತೋಮುಖವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.  

ಸುಮಾರು ?3.5 ಕೋಟಿ ವೆಚ್ಚದಲ್ಲಿ ವಿವಿಧ ದೇವಸ್ಥಾನಗಳು, ಚರಂಡಿ, ರಸ್ತೆ ಹಾಗೂ ಕಟ್ಟಡಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಶ್ರೀ ಮಹರ್ಷಿ ವಾಲ್ಮೀಕಿ ಸಭಾಭವನ, ಗ್ರಾಮ ದೇವತೆ ಹಾಗೂ ಯಲ್ಲಮ್ಮ ದೇವಿ ದೇವಸ್ಥಾನ ಸೇರಿದಂತೆ ವಿವಿಧ ಮಠಗಳ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.  

ಅಪೂರ್ಣಗೊಂಡಿರುವ ಗ್ರಾಮದ ಮಠದ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ವಾಲ್ಮೀಕಿ ಭವನದ ಅಭಿವೃದ್ಧಿಗೆ ಹೆಚ್ಚುವರಿಯಾಗಿ ?30 ಲಕ್ಷ ಅನುದಾನ ನೀಡಲಾಗಿದ್ದು, ಭವ್ಯ ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಯಾಸಿರ್ ಖಾನ್ ಪಠಾಣ್ ಹೇಳಿದರು.