ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Development works launched in Belagavi Rural constituency
ಬೆಳಗಾವಿ, 27: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರ ವಿಶೇಷ ಪ್ರಯತ್ನದಿಂದ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಚಾಲನೆ ನೀಡಲಾಯಿತು.
ಹಿಂಡಲಗಾದ ಶ್ರೀ ರೇಣುಕಾ ಮಂದಿರದ ಆವರಣದಲ್ಲಿ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಪೌಂಡ್ ವಾಲ್ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಭೂಮಿಪೂಜೆ ನೆರವೇರಿಸಿದರು. ಮಂದಿರದ ಆವರಣದ ಸುರಕ್ಷತೆ ಹಾಗೂ ಅಚ್ಚುಕಟ್ಟಾದ ನಿರ್ವಹಣೆಗೆ ಅನುಕೂಲವಾಗುವಂತೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮೃಣಾಲ್ ಹೆಬ್ಬಾಳಕರ, ಕ್ಷೇತ್ರದ ಜನರ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಬಸರಿಕಟ್ಟಿಯಲ್ಲಿ ಸುಮಾರು 60 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹಾಗೂ ಮರಾಠಿ ಶಾಲೆಗಳ ನಾಲ್ಕು ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಲಾಯಿತು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಮುಖಂಡರು ತಿಳಿಸಿದರು.
ಹೊಸ ಕೊಠಡಿಗಳ ನಿರ್ಮಾಣದಿಂದ ವಿದ್ಯಾರ್ಥಿಗಳಿಗೆ ಅಗತ್ಯ ತರಗತಿ ಕೊಠಡಿಗಳ ಸೌಲಭ್ಯ ದೊರೆಯಲಿದ್ದು, ಕನ್ನಡ ಹಾಗೂ ಮರಾಠಿ ಮಾಧ್ಯಮದ ವಿದ್ಯಾರ್ಥಿಗಳ ಕಲಿಕೆಗೆ ಮತ್ತಷ್ಟು ಅನುಕೂಲವಾಗಲಿದೆ. ಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವ ಮೂಲಕ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ನಿರಂತರ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮಗಳಲ್ಲಿ ವಿಠ್ಠಲ ದೇಸಾಯಿ, ಗಜಾನನ ಕಾಕತ್ಕರ್, ಯಲ್ಲಪ್ಪ ಎಸ್., ಸಂಜು ಕಾಕತ್ಕರ್, ರಾಜು ಜಗತಾಪ್, ಸಚಿನ್ ಕಿಲ್ಲೇಕರ, ಗುಂಡು ಎಂ., ಪರಶುರಾಮ, ಸುನಿಲ್ ಪಾವಸೆ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳ ಅಗತ್ಯಗಳಿಗೆ ಅನುಗುಣವಾಗಿ ಶಿಕ್ಷಣ, ಧಾರ್ಮಿಕ ಕೇಂದ್ರಗಳು ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 