ಯಡೂರಿನಲ್ಲಿ ಶಾಸಕ ಗಣೇಶ್ ಹುಕ್ಕೇರಿ ಜನ್ಮದಿನದ ಅಂಗವಾಗಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Development works launched in Yadur on the occasion of MLA Ganesh Hukkeri's birthday
ಲೋಕದರ್ಶನ ವರದಿ
ಮಾಂಜರಿ 24 : ಚಿಕ್ಕೋಡಿಹಿಸದಲಗಾ ಕ್ಷೇತ್ರದ ಶಾಸಕ ಗಣೇಶ್ ಹುಕ್ಕೇರಿ ಅವರು ಕೇವಲ ರಾಜಕಾರಣಿಯಲ್ಲ, ಕ್ಷೇತ್ರದ ಸವಾಂರ್ಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ನಿಜವಾದ ಶಿಲ್ಪಿಗಳಾಗಿದ್ದಾರೆ. ತಮ್ಮ ಅಧ್ಯಯನಶೀಲತೆ, ಪಾರದರ್ಶಕ ನಾಯಕತ್ವ ಹಾಗೂ ದೂರದೃಷ್ಟಿಯಿಂದ ರಾಜ್ಯ ರಾಜಕಾರಣ ಮತ್ತು ಸಮಾಜಸೇವೆಯಲ್ಲಿ ಹೊಸ ಮಾದರಿಯನ್ನು ನಿರ್ಮಿಸಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ತಳಮಟ್ಟದ ಜನರಿಗೆ ತಲುಪಿಸುವ ಕಾರ್ಯವನ್ನು ಅವರು ನಿರಂತರವಾಗಿ ಮಾಡುತ್ತಿದ್ದಾರೆ ಎಂದು ಶ್ರೀ ಗುರುಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.
ಚಿಕ್ಕೋಡಿ ತಾಲ್ಲೂಕಿನ ಸುಕ್ಷೇತ್ರ ಯಡೂರಿನಲ್ಲಿ ಶಾಸಕ ಗಣೇಶ್ ಹುಕ್ಕೇರಿ ಅವರ 48ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸುಮಾರು 2 ಕೋಟಿ ವೆಚ್ಚದ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಜೊತೆಗೆ ?8 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಸರ್ಕಾರಿ ಪ್ರಾಥಮಿಕ ಶಾಲೆಯ ಹೊಸ ಕೊಠಡಿಗಳ ಉದ್ಘಾಟನೆ ನೆರವೇರಿತು.
ಕಾರ್ಯಕ್ರಮದಲ್ಲಿ ಚಿಕ್ಕೋಡಿಹಿಸದಲಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪಾಟೀಲ, ಕಾಂಗ್ರೆಸ್ ಮುಖಂಡ ರವೀಂದ್ರ ಮಿರಜೆ, ಅಪ್ಪಾಸಾಹೇಬ ಜತ್ರಾಟೆ, ಇಂಗಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಜಾರಾಮ ಮಾನೆ, ರಾಹುಲ್ ದೇಸಾಯಿ, ಸಂಜಯ ಪಾಟೀಲ, ಶಿವಗೌಡ ಪಾಟೀಲ, ಬಸವಾಣಿ ನರವಾಡೆ, ಸುಭಾಷ್ ನರವಾಡೆ, ಸುಭಾಷ್ ಮಿರಜೆ, ಹುವಣ್ಣ ಚೌಗಲೆ, ರಾಜು ಚವ್ಹಾಣ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಶಿವಾನಂದ ಖೋರೋಶಿ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ರವೀಂದ್ರ ಮಿರಜೆ, ರಾಜಕೀಯ ಹುದ್ದೆಗಿಂತ ಸಾಮಾನ್ಯ ಜನರ ಹಿತಾಸಕ್ತಿ ಹಾಗೂ ಯುವ ಪೀಳಿಗೆಯ ಉಜ್ವಲ ಭವಿಷ್ಯ ನಿರ್ಮಾಣವೇ ಗಣೇಶ್ ಹುಕ್ಕೇರಿ ಅವರ ಪ್ರಮುಖ ಧ್ಯೇಯವಾಗಿದೆ. ಆದ್ದರಿಂದ ಅವರ ಜನ್ಮದಿನವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸುವುದಕ್ಕಿಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಅವರ ಚಿಂತನೆಗೆ ನಿಜವಾದ ಗೌರವ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿತು. ಕಾರ್ಮಿಕ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಲಾಯಿತು. ಮಾಂಜರಿ, ಯಡೂರು, ಚಂದೂರು, ಇಂಗಳಿ, ಕಲ್ಲೋಳ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅನೇಕ ಗಣ್ಯರು ಹಾಗೂ ಶಾಸಕ ಗಣೇಶ್ ಹುಕ್ಕೇರಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ 