ಅಭಿವೃದ್ಧಿ ಕಾಮಗಾರಿಗಳು ಸ್ಥಗಿತ: ಇಂದಿರಾನಗರ ಗ್ರಾಮಸ್ಥರ ಆಕ್ರೋಶ
Development works stalled: Indiranagar villagers outraged
ಲೋಕದರ್ಶನ ವರದಿ
ಯಮಕನಮರಡಿ 18 : ಕ್ಷೇತ್ರದ ವ್ಯಾಪ್ತಿಗೆ ಬರುವ ಇಂದಿರಾನಗರ ಹಾಗೂ ದಾದಾಭಾನಹಟ್ಟಿ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಗುತ್ತಿಗೆದಾರರ ಗೊಂದಲದಿಂದ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದಿರಾನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸುಮಾರು ಆರು ಕಾಮಗಾರಿಗಳು ಗುತ್ತಿಗೆದಾರರ ಒಳಜಗಳದಿಂದ ಆರಂಭವಾಗದೆ ಬಾಕಿ ಉಳಿದಿವೆ. ಕಾಮಗಾರಿಗಳ ಪೂಜೆ ನೆರವೇರಿಸಿ ಮೂರು-ನಾಲ್ಕು ಬಾರಿ ಗುದ್ದಲಿ ಪೂಜೆ ನಡೆದಿದ್ದರೂ, ಯಾವುದೇ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕ್ಷೇತ್ರದ ಸಚಿವರಾದ ಸತೀಶ್ ಅಣ್ಣಾಸಾಹೇಬ ಜಾರಕಿಹೊಳಿ ಅವರು ಗ್ರಾಮಗಳ ಅಭಿವೃದ್ಧಿಗಾಗಿ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರೂ, ಗುತ್ತಿಗೆದಾರರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ವಿಳಂಬ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಇಂದಿರಾನಗರದಲ್ಲಿ ರಸ್ತೆ ಕಾಮಗಾರಿಗೆ ಈಗಾಗಲೇ ಮೂರು ಬಾರಿ ಗುದ್ದಲಿ ಪೂಜೆ ನಡೆದಿದ್ದರೂ ಕಾಮಗಾರಿ ಆರಂಭವಾಗಿಲ್ಲ. ಇದೇ ರೀತಿ ಸಚಿವರ ಆಪ್ತ ಸಹಾಯಕ ನಾಗರಾಜ್ ದುಂದುರ್ ಅವರ ಮನೆಯ ಮುಂಭಾಗದ ರಸ್ತೆ ಕಾಮಗಾರಿಗೂ ಪೂಜೆ ನೆರವೇರಿಸಿ ಒಂದು ತಿಂಗಳು ಕಳೆದರೂ ಕೆಲಸ ಆರಂಭವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದಲ್ಲದೆ, ಇಂದಿರಾನಗರದ ಕನ್ನಡ ಶಾಲೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಈ ಬಗ್ಗೆ ಸಚಿವರ ಗಮನಕ್ಕೂ ತರಲಾಗಿದೆ. ಆದರೆ ಶಾಲಾ ಕಟ್ಟಡದ ದುರಸ್ತಿ ಹಾಗೂ ನಿರ್ಮಾಣ ಕಾಮಗಾರಿಗೂ ಗುತ್ತಿಗೆದಾರರು ಪೈಪೋಟಿ ನಡೆಸುತ್ತಿರುವುದರಿಂದ ವಿಳಂಬವಾಗುತ್ತಿದೆ ಎಂದು ಆರೋಪಿಸಲಾಗಿದೆ.
ಗ್ರಾಮದಲ್ಲಿ ಈಗಾಗಲೇ ಮೂರು ಸಮುದಾಯ ಭವನಗಳಿಗೆ ಮಂಜೂರಾತಿ ದೊರೆತಿದೆ. ಮಹರ್ಷಿ ವಾಲ್ಮೀಕಿ ಭವನ, ಜಗಜೀವನ್ ರಾಮ್ ಭವನ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ಮಂಜೂರಾಗಿದ್ದರೂ ಅವುಗಳ ಅನುಷ್ಠಾನ ಮಾತ್ರ ವಿಳಂಬವಾಗುತ್ತಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.
ಇಂದಿರಾನಗರ ಗ್ರಾಮದ ಹುಲಕಮ್ಮ ದೇವಸ್ಥಾನದ ಪಕ್ಕದಲ್ಲಿ ಸುಮಾರು 150 ಚದರ ಅಡಿ ಸರ್ಕಾರಿ ಜಾಗವಿದ್ದು, ಇಲ್ಲಿ ಭವನಗಳನ್ನು ನಿರ್ಮಿಸುವಂತೆ ಯುವಕರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗುತ್ತಿಗೆದಾರರ ಲಾಭದ ಉದ್ದೇಶದ ಒಳಜಗಳದಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗುತ್ತಿದ್ದು, ಇದು ಗ್ರಾಮದ ಅಭಿವೃದ್ಧಿಗೆ ಕಳಂಕ ತಂದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಈ ವಿಚಾರವನ್ನು ಮತದಾರರು ಗಮನದಲ್ಲಿಟ್ಟುಕೊಳ್ಳಲಿದ್ದಾರೆ ಎಂದು ಅವರು ಎಚ್ಚರಿಸಿದ್ದಾರೆ.
"ಮಕ್ಕಳ ಭವಿಷ್ಯ ರೂಪಿಸುವ ಜ್ಞಾನ ಮಂದಿರಗಳಾದ ಕನ್ನಡ ಶಾಲೆಗಳ ಸ್ಥಿತಿ ಹದಗೆಡುತ್ತಿದ್ದರೂ ಕಾಮಗಾರಿಗಳು ಆರಂಭವಾಗದಿರುವುದು ಬೇಸರದ ಸಂಗತಿ" ಎಂದು ಗ್ರಾಮಸ್ಥರು ಪತ್ರಕರ್ತರೊಂದಿಗೆ ತಮ್ಮ ಅಳಲು ತೋಡಿಕೊಂಡರು.
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ 