ದೇವೂ ಮಾಕೊಂಡ್, ಡಾ. ಪದ್ಮಿನಿ ನಾಗರಾಜ್ ಸೇರಿದಂತೆ ಐವರಿಗೆ ಬೆರಗು ಪ್ರಶಸ್ತಿ
Devoo Makond, Dr. Padmini Nagaraj Five people won the Beragu award
ಲೋಕದರ್ಶನ ವರದಿ
ಆಲಮೇಲ 02: ವಿಜಯಪುರ ಜಿಲ್ಲೆ ಕಡಣಿಯ ಬೆರಗು ಪ್ರಕಾಶನ ಸಂಸ್ಥೆಯು ನೀಡುವ ರಾಜ್ಯಮಟ್ಟದ 2025ನೇ ಸಾಲಿನ ಪ್ರೊ.ಎಚ್.ಟಿ.ಪೋತೆ ಹಸ್ತಪ್ರತಿ ಪ್ರಶಸ್ತಿಗೆ ಸಿಂದಗಿಯ ದೇವೂ ಮಾಕೊಂಡ ಅವರ "ಯುದ್ಧ ಮೃದಂಗ' ಅನುವಾದಿತ ಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ ಹಾಗೂ ಪ್ರೊ.ಎಚ್.ಟಿ.ಪೋತೆ ಸೃಜನಶೀಲ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಡಾ.ಪದ್ಮಿನಿ ನಾಗರಾಜು ಅವರ ಸಮುದ್ರದ ತೆರೆಯ ಸರಿಸಿ ಕಥಾ ಸಂಕಲನ ಮತ್ತು ವಿಜಯಪುರದ ಡಾ. ಸುಜಾತ ಚಲವಾದಿ ಅವರ ಲಚಮವ್ವ ಮತ್ತು ಇತರೆ ಕತೆಗಳು 2024ರ ಕೃತಿಗಳನ್ನು ಆಯ್ಕೆಮಾಡಲಾಗಿದೆ.
ದಿ.ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ 2024ರ ಸಾಲಿನ ಸೃಜನೇತರ ವಿಭಾಗದ ಪುಸ್ತಕ ಪ್ರಶಸ್ತಿಗೆ ಬಾಗಲಕೋಟೆಯ ಮಹಾದೇವ ಬಸರಕೋಡ ಅವರ ಸುರಧೇನು ಮತ್ತು ತುಮಕೂರಿನ ಅನಂತ ಕುಣಿಗಲ್ ಅವರ 'ಅಪ್ಪನ ಅಟೋಗ್ರಾಫ್' ಕೃತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್. ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆರಗು ಪ್ರಕಾಶನವು ಕಳೆದ 6 ವರ್ಷಗಳಿಂದಲೂ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದು. ಪ್ರಸಕ್ತ ವರ್ಷದ ಪ್ರಶಸ್ತಿಗೆ 118 ಪುಸ್ತಕಗಳು, ಹಾಗೂ ಹಸ್ತಪ್ರತಿ ಸ್ಪರ್ಧೆಗೆ 57 ಹಸ್ತಪ್ರತಿಗಳು ನಾಡಿನ ವಿವಿಧ ಭಾಗಗಳಿಂದ ಮತ್ತು ಮಹಾರಾಷ್ಟ್ರ, ಕೇರಳ ಹಾಗೂ ಬೇರೆ ಬೇರೆ ರಾಜ್ಯಗಳಿಂದ ಬಂದಿದ್ದವು. ಖ್ಯಾತ ಕವಿ, ಕತೆಗಾರ ವಾಸುದೇವ ನಾಡಿಗ ಹಾಗೂ ವಿಜಯಪುರದ ಸಾಹಿತಿ ಶಂಕರ ಬೈಚಬಾಳ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದರು.
ಹಸ್ತಪ್ರತಿ ಪ್ರಶಸ್ತಿಯು ಹತ್ತು ಸಾವಿರ ರೂ. ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯೊಳಗೊಂಡಿದ್ದು ಬೆರಗು ಪ್ರಕಾಶನವು ಹಸ್ತಪ್ರತಿಯನ್ನು ಪ್ರಕಟಿಸುವ ಮೂಲಕ ಗೌರವಿಸಲಿದೆ ಹಾಗೂ ಪುಸ್ತಕ ಪ್ರಶಸ್ತಿಯು ಐದು ಸಾವಿರ ರೂ.ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯೊಳಗೊಂಡಿದ್ದು ಜನೆವರಿ 2025ರ ಮೊದಲ ವಾರ ಕಡಣಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 