ಭಕ್ತ ಕನಕದಾಸರ ಜಯಂತಿ ಆಚರಣೆ

ಲೋಕದರ್ಶನ ವರದಿ

ಬೆಟಗೇರಿ 15: ಗ್ರಾಮದ ವಿವಿಡಿ ಸಕರ್ಾರಿ ಪ್ರೌಢ ಶಾಲೆಯಲ್ಲ್ಲಿ ಶುಕ್ರವಾರ ನ.15 ರಂದು ನಡೆದ ಭಕ್ತ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ಕನಕದಾಸರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ, ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಬಳಿಕ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು, ಕನಕದಾಸರ ಬದುಕು, ಬರಹ ಹಾಗೂ ದಾಸ ಸಾಹಿತ್ಯದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮೋಹನ ತುಪ್ಪದ, ಮಂಜುನಾಥ ಹತ್ತಿ, ರಮೇಶ ಬುದ್ನಿ, ವಿ.ಬಿ.ಬಿರಾದಾರ, ವೀಣಾ ಹತ್ತಿ, ಮುರಕಟ್ನಾಳ, ಮಲ್ಹಾರಿ ಪೋಳ, ರಾಕೇಶ ನಡೋಣಿ, ಶುಭಾ.ಬಿ., ಶಾಲೆಯ ಮಕ್ಕಳು, ಶಿಕ್ಷಕರು, ಸಿಬ್ಬಂದಿ, ಎಸ್ಡಿಎಮ್ಸಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. 

ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆ: ಸ್ಥಳೀಯ ಸಕರ್ಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಶುಕ್ರವಾರದಂದು  ಕನಕದಾಸರ ಜಯಂತಿ ಆಚರಿಸಲಾಯಿತು. ಹೆಣ್ಣು ಮಕ್ಕಳ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಮೇಶ ನೀಲಣ್ಣವರ ಅವರು,  ಕನಕದಾಸರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಿ, ಕನಕದಾಸರ ಕುರಿತು ಮಾತನಾಡಿದರು. ಶಾಲೆಯ ಮುಖ್ಯ ಶಿಕ್ಷಕರಾದ ವೈ.ಸಿ.ಶೀಗಿಹಳ್ಳಿ, ಆರ್.ಬಿ.ಬೆಟಗೇರಿ, ಗಂಡು ಮಕ್ಕಳ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಉದ್ದಪ್ಪ ಚಂದರಗಿ, ಉಭಯ ಶಾಲೆಯ ಶಿಕ್ಷಕರು, ಅತಿಥಿ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಗಣ್ಯರು, ಇತರರು ಇದ್ದರು. 

ಪತ್ರೇಪ್ಪನ ತೋಟದ ಶಾಲೆ: ಗ್ರಾಮದ ಪತ್ರೇಪ್ಪನ ತೋಟದ ಸಕರ್ಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶುಕ್ರವಾರದಂದು ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವಿಠಲ ಕೋಣಿ ಅವರು, ಕನಕದಾಸರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಿದರು. ಶಾಲೆಯ ಮುಖ್ಯ ಶಿಕ್ಷಕ ಬಿ.ಎ.ಕೋಟಿ, ಹನುಮಂತ ಕಟ್ಟಿಮನಿ, ಶ್ರೀಕಂಠಯ್ಯ ಮಠಪತಿ, ಎಸ್.ಜಿ.ಗುಡಸಿ, ಶಾಲೆಯ ಶಿಕ್ಷಕರು, ಅತಿಥಿ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಗಣ್ಯರು, ಇತರರು ಇದ್ದರು.