ಹೊಳಗುಂದಿಯಲ್ಲಿ ಕೆಂಡ ತುಳಿದು ಹರಕೆ ತೀರಿಸಿದ ಭಕ್ತರು
Devotees fulfill their vow by trampling on sand in Holagundi
ಹೊಳಗುಂದಿಯಲ್ಲಿ ಕೆಂಡ ತುಳಿದು ಹರಕೆ ತೀರಿಸಿದ ಭಕ್ತರು
ಹೂವಿನಹಡಗಲಿ: ತಾಲ್ಲೂಕಿನ ಹೊಳಗುಂದಿಯಲ್ಲಿ ಶನಿವಾರ ಬೆಳಿಗ್ಗೆ 11ಗಂಟೆಗೆ ವೀರಭದ್ರೇಶ್ವರ ಸ್ವಾಮಿಯ ಅಗ್ನಿ ಮಹೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತುಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ ಸಿದ್ದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಸಮಾಳ, ನಂದಿಕೋಲು, ಮಂಗಳ ವಾದ್ಯಗಳ ಭವ್ಯ ಮೆರವಣಿಗೆಯಲ್ಲಿ ಕರೆತರಲಾಯಿತು. ಇದೇ ವೇಳೆ ಪುರವಂತರು ಸ್ವಾಮಿಯ ಮಹಿಮೆಯನ್ನು ವಡಪುಗಳನ್ನು ಹೇಳುತ್ತಾ ಕಲಾ ಪ್ರದರ್ಶನ ನೀಡಿದರು. ಹರಕೆ ಹೊತ್ತ ಭಕ್ತರು ಶಸ್ತ್ರ ಹಾಕಿಸಿಕೊಂಡು ಭಕ್ತಿಯ ಪರಾಕಾಷ್ಠೆ ಮೆರೆದರು.ವೀರಭದ್ರೇಶ್ವರ ದೇವಾಲಯ ಬಳಿ ಅಣಿಗೊಳಿಸಿದ್ದ ಅಗ್ನಿಕುಂಡಕ್ಕೆ ಸಾಂಪ್ರದಾಯಿಕ ಪೂಜೆ ನೆರವೇರಿಸುತ್ತಿದ್ದಂತೆ ಸ್ವಾಮಿಯ ಪಲ್ಲಕ್ಕಿ ಹೊತ್ತ ಭಕ್ತರು ಅಗ್ನಿ ಕುಂಡದಲ್ಲಿ ನಡೆದರು. ನಂತರ ಹರಕೆ ಹೊತ್ತ ಭಕ್ತರು ನಿಗಿನಿಗಿ ಕೆಂಡ ತುಳಿದು ಭಕ್ತಿಯನ್ನು ಸಮರ್ಿಸಿದರು. ಅಗ್ನಿ ಹಾಯುವ ಕಾರ್ಯಕ್ರಮ ನೋಡಲು ಜನರು ಆಗಮಿಸಿದ್ದರು. ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 