ಏಳುಹೆಡೆ ನಾಗಪ್ಪ ದೇವಸ್ಥಾನದಲ್ಲಿ ಪುರೋಹಿತ ವಿಶ್ವನಾಥಸ್ವಾಮಿಗೆ ಭಕ್ತರ ಸನ್ಮಾನ
Devotees pay homage to Purohita Vishwanathaswamy at Eluhede Nagappa Temple
ಕಂಪ್ಲಿ 30: ತಾಲೂಕು ಸಮೀಪದ ಬುಕ್ಕಸಾಗರ ಗ್ರಾಮದಲ್ಲಿರುವ ಸಹಸ್ರಾರು ಭಕ್ತರ ಆರಾಧ್ಯ ದೈವ ಶ್ರೀ ಏಳುಹೆಡೆ ನಾಗಪ್ಪ ದೇವಸ್ಥಾನದಲ್ಲಿ ಶುಭ ಶುಕ್ರವಾರದಂದು ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ನಾನಾ ಧಾರ್ಮಿಕ ಕೈಂಕಾರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. ಇಲ್ಲಿನ ಪುರೋಹಿತ ಎಚ್.ಎಂ.ವಿಶ್ವನಾಥಸ್ವಾಮಿ ಸಾನಿಧ್ಯದಲ್ಲಿ ಪಂಚಾಮೃತ ಅಭಿಷೇಕ, ಪುಷ್ಪಾರ್ಚಾನೆ, ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಸ್ರವಾಗಿ ನಡೆದವು. ಭಕ್ತರು ನಾಗಪ್ಪ ದೇವರ ದರ್ಶನ ಪಡೆದು ಪುನೀತರಾದರು. ನಂತರ ಭಕ್ತಾಧಿಗಳು ಪುರೋಹಿತ ವಿಶ್ವನಾಥಸ್ವಾಮಿ ಇವರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿಗಳಾದ ಬಿ.ನಾಗಪ್ಪ, ಹೆಚ್.ಪ್ರಶಾಂತ್, ಎಸ್.ವಿ.ವಿರೇಶ, ಹನುಮಂತಪ್ಪ ಸೇರಿದಂತೆ ಭಕ್ತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 