ರೇಣುಕಾಚಾರ್ಯ ಜಯಂತ್ಯೋತ್ಸವ ಭಕ್ತಿಪೂರ್ವಕ ಆಚರಣೆ
Devotional celebration of Renukacharya Jayanti
ಲೋಕದರ್ಶನ ವರದಿ
ಮುಂಡಗೋಡ 05 : ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಶ್ರೀ ರೇಣುಕಾಚಾರ್ಯ ಜಯಂತ್ಯೋತ್ಸವವನ್ನು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ದಿವ್ಯ ಸಾನಿಧ್ಯ ವಹಿಸಿದ್ದ ಕಲಘಟಗಿ 12 ಮಠಗಳ ರೇವಣಸಿದ್ದ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಧರ್ಮವು ಯಾವುದೇ ಜಾತಿ ಅಥವಾ ಭೇದವನ್ನು ಕೇಳುವುದಿಲ್ಲ.
ಪ್ರತಿಯೊಬ್ಬ ಜೀವಿಯನ್ನೂ ಸಮಾನವಾಗಿ ಕಾಣುತ್ತದೆ. ಅಜ್ಞಾನಿಗಳನ್ನು ಅಸಹ್ಯಪಡದೆ ದಯೆ ಹಾಗೂ ಸಹಾನುಭೂತಿಯೊಂದಿಗೆ ನಡೆದುಕೊಳ್ಳಬೇಕು ಎಂದು ಉಪದೇಶಿಸಿದರು. ಪಟ್ಟಣದ ಹಳೂರಿನ ಹಿರೇಮಠದ ವೇದಮೂರ್ತಿ ರುದ್ರಮುನಿ ಮಹಾಸ್ವಾಮಿಗಳು ಮಾತನಾಡಿ, ಸತ್ಯ, ಅಹಿಂಸೆ, ದಯೆ, ಕ್ಷಮೆ ಮತ್ತು ದಾನದಂತಹ ಧರ್ಮಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿ.ಎಸ್. ಪಾಟೀಲ ಅವರು, ಶಿವನಿಂದ ಪಡೆದ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಬೇಕು. ಧರ್ಮದ ಉಳಿವು ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಒತ್ತಿ ಹೇಳಿದರು.
ತಾಲೂಕು ದಂಡಾಧಿಕಾರಿ ಶಂಕರ್ ಗೌಡಿ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊನೆಯಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಕಲಘಟಗಿ 12 ಮಠಗಳ ರೇವಣಸಿದ್ದ ಶಿವಾಚಾರ್ಯ ಸ್ವಾಮಿಗಳು ಹಾಗೂ ವೇದಮೂರ್ತಿ ರುದ್ರಮುನಿ ಮಹಾಸ್ವಾಮಿಗಳು ಸನ್ಮಾನ್ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್. ಪಾಟೀಲ, ವೇದಮೂರ್ತಿ ರುದ್ರಮುನಿ ಸ್ವಾಮಿಗಳು, ಜಂಗಮ ಸಮುದಾಯದ ಅಧ್ಯಕ್ಷ ಮಂಜುನಾಥ್ ಎಸ್. ಹಿರೇಮಠ, ಉಪಾಧ್ಯಕ್ಷ ಚನ್ನಬಸಯ್ಯ ಹಿರೇಮಠ, ಕಸಾಪ ಅಧ್ಯಕ್ಷ ವಿ.ಎಸ್. ಕೋಣಸಾಲಿ, ನಾಗಪ್ಪ ಕಡಗಿ, ಬಸಣ್ಣ, ಬಸಯ್ಯ ತೋಟಯ್ಯನವರು, ಚಿದಾನಂದ ಪಾಟೀಲ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಸ್.ಬಿ. ಹೂಗಾರ ನಿರ್ವಹಿಸಿದರು. ತಾಲೂಕು ಪುರೋಹಿತ ಸಂಘ ಕಾತೂರು ವತಿಯಿಂದ ಒಂದಾರೆ್ಣ ಸಲ್ಲಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 