ಸ್ವಾಮಿ ವಿವೇಕಾನಂದರ ಸ್ಮೃತಿ ದಿನಕ್ಕೆ ಭಕ್ತಿಪೂರ್ವಕ ನಮನ
Devout tributes on the death anniversary of Swami Vivekananda
ಹುಬ್ಬಳ್ಳಿ 05: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಕೆ.ಎಲ್.ಇ ಸಂಸ್ಥೆಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದೇಶದ ಯುವಕರಿಗೆ ಆತ್ಮಶಕ್ತಿ ಹಾಗೂ ಆಂತರ್ಯದ ಸತ್ವ ತುಂಬುವಲ್ಲಿ ಅಭೂತ ಪೂರ್ವ ಯಶಸ್ಸು ಸಾದಿಸಿದ ಶ್ರೇಷ್ಠ ಸಂತ, ಮಹಾತ್ಮ, ಅದ್ಭುತ ತತ್ವಜ್ಞಾನಿ ಸ್ವಾಮಿ ವಿವೇಕಾನಂದ ಅವರ ಸ್ಮೃತಿ ದಿನ ಪ್ರಯುಕ್ತ ವೀರ ಸಂನ್ಯಾಸಿ ಸ್ವಾಮಿ ವಿವೇಕಾನಂದ ಅವರ ಪುತ್ಥಳಿಗೆ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನಮನ, ಪ್ರಣಾಮಗಳನ್ನು ಸಲ್ಲಿಸಿದರು.
ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಡಿ.ಕೆ.ವಾಘಮೊಡೆ, ಗ್ರಂಥಪಾಲಕಿ ಡಾ ಪ್ರೀತಿ ಎಸ್ ಪಾಟೀಲ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಉಪಾಧ್ಯಕ್ಷ ಚನ್ನಬಸಪ್ಪ ಧಾರವಾಡಶೆಟ್ಟರ, ಎನ್.ಎಸ್.ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ನೇತ್ರಾವತಿ ಗಬ್ಬೂರ, ಕಾರ್ತಿಕೇಯ ಎಸ್ ವಸ್ತ್ರದ್, ಎನ್.ಎಸ್.ಎಸ್ ವಿದ್ಯಾರ್ಥಿಗಳಾದ ಚೇತನ ಅನೇಕನವರ, ಬಸವರಾಜ ಮಜ್ಜಿಗುಡ್ಡ, ಶಶಿ ಮಾಲಿ, ಪ್ರಜ್ವಲ್ ಕೊಪ್ಪಳ, ಸಂಕಲ್ಪ ತೆಗ್ಗಿಹಳ್ಳಿ, ಆಶಿಶ್ ಕಾಪರೆ, ಆಶಾ ಉಂಡ್ರೆ, ರೋಹಿಣಿ ಗಡಾದ, ಮೇಘಾ ಮಜ್ಜಿಗುಡ್ಡ, ಕಾವ್ಯ ನಂದಿಹಳ್ಳಿ, ಸ್ನೇಹಾ, ಮುಂತಾದವರು.
ಶ್ರದ್ಧಾ, ಭಕ್ತಿಯಿಂದ ಭಾಗವಹಿಸಿ, ನಮನ ಸಲ್ಲಿಸಿದರು. ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ ಡಾ. ಸುರೇಶ ಡಿ. ಹೊರಕೇರಿ ಮಾತನಾಡಿ ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯುವಕರಿಗೆ ಸ್ಪೂರ್ತಿ, ಚೈತನ್ಯದ ಚಿಲುಮೆ ಆಗಿದ್ದಾರೆ. ಸ್ವಾಮಿ ವಿವೇಕಾನಂದರ ಸಾಹಿತ್ಯ, ಬದುಕು, ಬರಹಗಳನ್ನು ಯುವಕರು ಓದಬೇಕು. ಯುವಕರು ದೇಶದ ಆಸ್ತಿ ಆಗಬೇಕು. ಮನುಕುಲದ ಉದ್ಧಾರಕ್ಕೆ ಅವತರಿಸಿ ಬಂದವರು ಸ್ವಾಮಿ ವಿವೇಕಾನಂದರು. ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರ ತತ್ವಗಳನ್ನು ಜಗತ್ತಿನಾದ್ಯಂತ ಬಿತ್ತರಿಸಿದರು. ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ವಿಚಾರಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಠ್ಯದಲ್ಲಿ ಅಳವಡಿಸಬೇಕು. ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಿದರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 