ಪ್ರಜಾಸೌಧ ಸ್ಥಳ ವಿರೋಧಿಸಿ 22ನೇ ದಿನಕ್ಕೆ ಮುಂದುವರಿದ ಧರಣಿ ಸತ್ಯಾಗ್ರಹ; ಹಮಾಲರ ಸಂಘದಿಂದ ಸಂಪೂರ್ಣ ಬೆಂಬಲ
Dharani Satyagraha continues for 22nd day against Praja Soudha site; Full support from Hamalara Sang
ತಾಳಿಕೋಟೆ 18 : ತಾಲೂಕಿನ ಮೇಲೆಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ತಾಳಿಕೋಟಿ ಪಟ್ಟಣದಲ್ಲಿಯೇ ಪ್ರಜಾಸೌಧ ನಿರ್ಮಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು 22ನೇ ದಿನಕ್ಕೆ ಮುಂದುವರಿದಿದೆ.ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಡೆಯುತ್ತಿರುವ ಈ ಸತ್ಯಾಗ್ರಹಕ್ಕೆ ಬಸವೇಶ್ವರ ಮಾರ್ಕೆಟ್ ಯಾರ್ಡ್ ಹಮಾಲರ ಸಂಘವು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಮಂಗಳವಾರ ನಡೆದ 21ನೇ ದಿನದ ಸತ್ಯಾಗ್ರಹದಲ್ಲಿ ಹಮಾಲರ ಸಂಘದ ಸದಸ್ಯರು ಭಾಗವಹಿಸಿ ಹೋರಾಟಕ್ಕೆ ಕೈಜೋಡಿಸಿದರು.
ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಾಶೀನಾಥ ಮುರಾಳ ಮಾತನಾಡಿ, ಈಗಾಗಲೇ ಪ್ರಜಾಸೌಧಕ್ಕೆ ನಿಗದಿಪಡಿಸಿರುವ ಸ್ಥಳವು ಪಟ್ಟಣದಿಂದ ಬಹಳ ದೂರವಾಗಿದ್ದು, ನಿರ್ಜನ ಪ್ರದೇಶದಲ್ಲಿದೆ. ಇದು ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರ ಸುರಕ್ಷತೆಗೆ ಅನುಕೂಲಕರವಲ್ಲ. ಆದ್ದರಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಳಿಕೋಟಿ ಪಟ್ಟಣದಲ್ಲಿಯೇ ಲಭ್ಯವಿರುವ ಸರ್ಕಾರಿ ಜಾಗದಲ್ಲಿ ಪ್ರಜಾಸೌಧ ನಿರ್ಮಿಸಬೇಕು ಎಂದು ಒತ್ತಾಯಿಸಿದರು. ಇನ್ನೂ ಅವರು, ಈಗಾಗಲೇ ನಿಗದಿಪಡಿಸಿರುವ ಸ್ಥಳವನ್ನು ಕೂಡಲೇ ರದ್ದುಪಡಿಸಬೇಕು. ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಾಗ ನೀಡಿದವರಲ್ಲಿ ಸ್ವಹಿತಾಸಕ್ತಿ ಇದೆ ಎಂದು ಆರೋಪಿಸಿದ ಅವರು, ರಾಜ್ಯ ಹೆದ್ದಾರಿಯಿಂದ 18 ಮೀಟರ್ ಅಂತರದಲ್ಲಿರುವ ಜಾಗ ನೀಡುವುದಾಗಿ ಹೇಳಿ, ವಾಸ್ತವವಾಗಿ ಸುಮಾರು 900 ಮೀಟರ್ ಒಳಗಿನ ಜಾಗವನ್ನು ನೀಡಿ ಸರ್ಕಾರ ಮತ್ತು ಸಾರ್ವಜನಿಕರನ್ನುಮೋಸ ಮಾಡಿ ತಪ್ಪುದಾರಿಗೆಳೆದುಕೊಂಡಿದ್ದಾರೆ ಎಂದು ಹೇಳಿದರು.ಈ ಹೋರಾಟಕ್ಕೆ ಪಟ್ಟಣದ ಎಲ್ಲಾ ಸಮುದಾಯದ ಹಿರಿಯರು ಪ್ರತಿದಿನ ಭಾಗವಹಿಸಿ ಬೆಂಬಲ ಸೂಚಿಸುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಮಾಲರ ಸಂಘದ ಅಧ್ಯಕ್ಷ ಪತ್ತೆಖಾನ್ ಸೋಪಿ, ಶರಣಪ್ಪ ಪೂಜಾರಿ, ಯಮನಪ್ಪ ಬರದೇನಾಳ, ದೇವಪ್ಪ ಅಲ್ಲಾಪುರ, ಬೀರ್ಪ ಪೂಜಾರಿ, ಮಲ್ಕಪ್ಪ ಕಟ್ಟಿಮನಿ, ಲಕ್ಷ್ಮಣ ತಳವಾರ, ಭೀಮಾಶಂಕ ಅಂಬಿಗೇರ, ಭೀಮಣ್ಣ ತಳವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಹೋರಾಟ ಸಮಿತಿಯ ಅಧ್ಯಕ್ಷ ದಶರತಸಿಂಗ್ ಮನಗೂಳಿ, ಎಸ್.ಬಿ. ಕಟ್ಟಿಮನಿ, ಮುತ್ತಪ್ಪ ಚಮಲಾಪುರ, ಮೆಹೆಬೂಬ ಚೋರಗಸ್ತಿ, ಕಾಶೀನಾಥ ಮುರಾಳ, ಮುರಿಗೆಪ್ಪ ಸರಶೆಟ್ಟಿ, ದತ್ತು ಹೆಬಸೂರ, ಪರಶುರಾಮ ತಂಗಡಗಿ, ವಿಜಯಸಿಂಗ್ ಹಜೇರಿ, ಬಸವರಾಜ ಕಶೆಟ್ಟಿ, ಸಿದ್ದನಗೌಡ ಪಾಟೀಲ ಸೇರಿದಂತೆ ಅನೇಕರು ಮತ್ತು ಪಟ್ಟಣದ ಗಣ್ಯರು ಭಾಗವಹಿಸಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 