ಬಸವೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳ ಯೋಜನೆ ಒಂದು ಲಕ್ಷ ರೂ. ಸಹಾಯ
Dharmasthala Project help Rs. 1 lakh for Basaveshwara Temple
ರಾಯಬಾಗ 08 ಭಾರತ ದೇಶದ ಸಂಸ್ಕೃತಿಯ ಪ್ರತೀಕವಾದ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಧರ್ಮಸ್ಥಳ ಯೋಜನೆಯಿಂದ ಸಹಾಯ ನೀಡಿ ದೇವಸ್ಥಾನಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಾಲೂಕು ಯೋಜನಾಧಿಕಾರಿ ಮಹೇಶಪ್ಪ ಜಿ ಹೇಳಿದರು.
ಮಂಗಳವಾರ ತಾಲೂಕಿನ ದಿಗ್ಗೆವಾಡಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೇವಸ್ಥಾನ ಜೀರ್ಣೋದ್ಧಾರ ಕ್ಕಾಗಿ ಮಂಜೂರಾದ 1 ಲಕ್ಷ ರೂ. ಸಹಾಯ ಧನ ಚೆಕ್ ವಿತರಿಸಿ ಮಾತನಾಡಿದ ಅವರು, ಧರ್ಮಸ್ಥಳ ಯೋಜನೆಯಡಿ ಅನೇಕ ಸಾಮಾಜಿಕ ಕಾರ್ಯ ಮಾಡಲಾಗುತ್ತಿದೆ. ನಿರುದ್ಯೋಗ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ತರಬೇತಿ ನೀಡಿ, ಅವರಿಗೆ ಬ್ಯಾಂಕಗಳಿಂದ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಹಾಯ ಧನ ನೀಡಲಾಗುತ್ತಿದೆ. ವೃದ್ಧರಿಗೆ ವೃದ್ಧಾಪ್ಯ ವೇತನ, ಮನೆ ನಿರ್ಮಾಣ ಮಾಡಿ ಕೊಡಲಾಗುತ್ತದೆ ಎಂದು ತಿಳಿಸಿದರು.
ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ ಮಿರ್ಜೆ, ಡಿ.ಎಲ್.ಮಿರ್ಜೆ, ಮಲ್ಲಪ್ಪ ಮೈಶಾಳೆ, ಅಪ್ಪಾಸಾಹೇಬ ಮೈಶಾಳೆ, ಗಂಗಾಧರ ಮೈಶಾಳೆ, ಗೀರೀಶ ಪಾಟೀಲ, ಶಂಕರ ಸಗರೆ, ಪ್ರಕಾಶ ಸಗರೆ, ಕೃಷ್ಣಪ್ಪ ಸಗರೆ, ಗಜೇಂದ್ರ ಜಲಾಲಪೂರೆ, ಮಂಜುನಾಥ, ಕಿರಣ, ಜಯಶ್ರೀ, ಕಾವೇರಿ ಸೇರಿ ದೇವಸ್ಥಾನ ಕಮಿಟಿ ಸದಸ್ಯರು ಇದ್ದರು.ಫೋಟೊ: 08 ರಾಯಬಾಗ 1ಫೋಟೊ ಶೀರ್ಷಿಕೆ: ರಾಯಬಾಗ: ತಾಲೂಕಿನ ದಿಗ್ಗೆವಾಡಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೇವಸ್ಥಾನ ಜೀರ್ಣೋದ್ಧಾರ ಕ್ಕಾಗಿ ಮಂಜೂರಾದ 1 ಲಕ್ಷ ರೂ. ಸಹಾಯ ಧನ ಚೆಕ್ ನ್ನು ದೇವಸ್ಥಾನ ಕಮಿಟಿಯವರಿಗೆ ಯೋಜನಾಧಿಕಾರಿ ಮಹೇಶಪ್ಪ ವಿತರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 