ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಪಾಲಿಗೆ ವರದಾನ : ಜೆ.ಚಂದ್ರಶೇಖರ
Dharmasthala Rural Development Project a boon for women: J. Chandrashekar
ಕಂಪ್ಲಿ 24 : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರ ಪಾಲಿಗೆ ವರದಾನವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಜೆ.ಚಂದ್ರಶೇಖರ ಹೇಳಿದರು.ಪಟ್ಟಣದ ವೀರಶೈವ ಭವನದಲ್ಲಿ ಕಂಪ್ಲಿ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿ, ಸ್ವಸಹಾಯಕ ಸಂಘದ ಸಬಲೀಕರಣವಾಗಿದೆ. ಬಡವರ ಹಾಗೂ ನೊಂದವರ ಕಣ್ಣೀರು ವರೆಸುವ ಕಾರ್ಯಕ್ರಮವಾಗಿದೆ. ಕೋಟ್ಯಾಂತರ ಜನರು ಸ್ವಸಹಾಯಕ ಸಂಘದ ಪಾಲುದಾರರಾಗಿದ್ದಾರೆ.
ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡಲು ಸಾಲ ಸೌಲಭ್ಯ ನೀಡುವುದರ ಜತೆಗೆ ಸಮಾಜದ ಬಗ್ಗೆ ಕಾಳಜಿಯನ್ನು ಹೊಂದಿ ಹತ್ತು ಹಲವು ಜನಪರ ಕಾರ್ಯಗಳನ್ನು ನಿರಂತರವಾಗಿ ನಡೆಸುತ್ತಾ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಗ್ರಾಮಾಭಿವೃದ್ಧಿ ಯೋಜನೆ ಸಂಜೀವಿನಿಯಾಗಿದೆ’ ಎಂದರು.ಸಂಪನ್ಮೂಲ ವ್ಯಕ್ತಿ ಡಾ.ಎಚ್.ಸಿ.ರಾಘವೇಂದ್ರ ಇವರು ಮಹಿಳೆ ಮತ್ತು ಮಕ್ಕಳಿಗೆ ಇರುವ ಕಾನೂನುಗಳು ಹಾಗೂ ವಿವಿಧ ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾಹಿತಿ ಹಂಚಿಕೊಂಡರು.ಶಿವಾನಿ ಮಹಿಳಾ ವಿಕಾಸ ಜ್ಞಾನ ಕೇಂದ್ರದ ಅಧ್ಯಕ್ಷೆ ನಿರ್ಮಲಾ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.ನಂತರ ಮಹಿಳಾ ಸಾಧಕರಾದ ವಿದ್ಯಾರ್ಥಿನಿ ಎಸ್ ಪೂಜಾ ಸೇರಿದಂತೆ ವಿವಿಧ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನಿಸಲಾಯಿತು. ಕರಕುಶಲ ಪ್ರದರ್ಶನ ಪ್ರದರ್ಶಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ನಿರ್ದೇಶಕ ರೋಹಿತಾಕ್ಷ, ತಾಲೂಕು ಯೋಜನಾಧಿಕಾರಿ ರಾಘವೇಂದ್ರ ಎಲ್, ಪಿಎಸ್‌ಐ ಅವಿನಾಶ ಎಎಸ್‌ಐ ಬಸವರಾಜ, ಪತ್ರಕರ್ತರಾದ ವಾಗೀಶ್, ಬಳ್ಳಾರಿ ವಿರೇಶ, ಅಕ್ಕಮಹಾದೇವಿ ಮಹಿಳಾ ಮಂಡಳಿ ಅಧ್ಯಕ್ಷೆ ಡಾ.ಶಾರದ ಹಿರೇಮಠ, ಸಪ್ತಗಿರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಾ.ವೆಂಕಟೇಶ ಸಿ.ಭರಮಕ್ಕನವರ್, ಪುರಸಭೆ ಮಾಜಿ ಸದಸ್ಯ ರಾಮಾಂಜನೇಯ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕಡ ಸದಸ್ಯೆ ಉಮಾ ಮಹೇಶ್ವರಿ, ಧರ್ಮಸ್ಥಳ ಸಂಘದ ಜ್ಞಾನ ವಿಕಾಸ ಸಮನ್ವಯಾಧಿಕಾರಿ ರೇಖಾ, ಕೃಷಿ ಅಧಿಕಾರಿ ಎಸ್.ಡಿ.ಸಂಜೀವಕುಮಾರ, ಸಿಬ್ಬಂದಿ ಶೃತಿ, ಮೇಲ್ವಾಚರಕರಾದ ಮಂಜಣ್ಣ, ಶ್ರೀಶೈಲಾ, ಮಂಜುಳಾ, ಚೇತನ್ ಸೇರಿದಂತೆ ಸ್ವಸಹಾಯ ಸಂಘದ ಪದಾಧಿಕಾರಿಗಳು, ಸದಸ್ಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 