ಧರ್ಮಸ್ಥಳ ಪ್ರಕರಣ: ಯಾರೋ ಹೇಳಿದರು ಅಂತ SIT ರಚನೆ ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Dharmasthala case: SIT cannot be formed just because someone said so: Chief Minister Siddaramaiah
ಮೈಸೂರು 18: ‘ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಪೊಲೀಸ್ ಇಲಾಖೆಯವರು ಹೇಳಿದರೆ ಮಾಡುತ್ತೇವೆ. ಈ ಪ್ರಕರಣದಲ್ಲಿ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ. ಯಾರೇ ಒತ್ತಡ ಹಾಕಿದರೂ, ಯಾರ ಮಾತುಗಳನ್ನೂ ನಾವು ಕೇಳುವುದಿಲ್ಲ. ಎಲ್ಲವನ್ನೂ ಕಾನೂನು ಪ್ರಕಾರವೇ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಆರೋಪಗಳ ಕುರಿತ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅವರು ನೀಡಿರುವ ಹೇಳಿಕೆಗೆ ನಾವು ಪರವೂ ಇಲ್ಲ, ವಿರೋಧವೂ ಇಲ್ಲ. ಪೊಲೀಸ್ ಇಲಾಖೆಯವರು ಸಲ್ಲಿಸುವ ವರದಿಯ ಆಧಾರದ ಮೇಲೆ, ಎಸ್‌ಐಟಿ ಮಾಡಬೇಕೆಂಬ ಶಿಫಾರಸು ಬಂದರೆ ರಚಿಸುತ್ತೇವೆ. ಶನಿವಾರದೊಳಗೆ ಎಲ್ಲವೂ ಗೊತ್ತಾಗಲಿದೆ’ ಎಂದರು.
‘ದೂರುದಾರ 10 ವರ್ಷ ತಲೆಮರೆಸಿಕೊಂಡಿದ್ದ. ಆತ, ಪೊಲೀಸರ ಎದುರು ಹೇಳಿಕೆ ಕೊಟ್ಟಿದ್ದಾನೆ. ನಾನೇ ಹೂತು ಹಾಕಿದ್ದೇನೆ ಎಂದೆಲ್ಲಾ ಹೇಳಿದ್ದಾನೆ. ಆ ಜಾಗಕ್ಕೆ ಕರೆದುಕೊಂಡು ಹೋದರೆ ಹೆಣಗಳನ್ನು ತೋರಿಸುತ್ತೇನೆ ಎಂದೂ ಹೇಳಿದ್ದಾನೆ. ಪೊಲೀಸರು ಏನು ಹೇಳುತ್ತಾರೆಯೋ ನೋಡೋಣ’ ಎಂದು ಹೇಳಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 