ಧಾರವಾಡ ಐಡಲ್: 2025 ಗ್ರ್ಯಾಂಡ್ ಪಿನಾಲೆ ಕಾರ್ಯಕ್ರಮ
Dharwad Idol: 2025 Grand Finale Program
ಧಾರವಾಡ 31: ನಗರದ ಮಕ್ಕಳ ಅಕಾಡೆಮಿಯ ರಜತ ಮಹೋತ್ಸವದ ನಿಮಿತ್ತ ಗುಜ್ಜಾಡಿ ಸ್ವರ್ಣ ಜುವೆಲ್ಲರ್ಸ, ಧಾರವಾಡ ಹಾಗೂ ಕುಮಾರೇಶ್ವರ ಕಲ್ಚರಲ್ ಸೊಸೈಟಿ ಸಹಯೋಗದಲ್ಲಿ ಧಾರವಾಡ ಐಡಲ್‌ಹಿ2025 ಗ್ರ್ಯಾಂಡ್ ಪಿನಾಲೆ ಕಾರ್ಯಕ್ರಮವನ್ನು ದಿ. 02.11.2025ರಂದು ಸಂಜೆ 5 ಗಂಟೆಗೆ ನಗರದ ಸೃಜನಾ ರಂಗಮಂದಿರದಲ್ಲಿ ಏರಿ್ಡಸಲಾಗಿದೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ಖ್ಯಾತ ಹಿಂದೂಸ್ಥಾನಿ ಗಾಯಕಿ ವಿದುಷಿ ಸಂಗೀತಾ ಕಟ್ಟಿ, ವಿದುಷಿ ಸುಜಾತಾ ಗುರವ, ಡಾ. ಶ್ರೀಧರ ಕುಲಕರ್ಣಿ ಮತ್ತು ಖ್ಯಾತ ಸಿತಾರವಾದಕ ಉಸ್ತಾದ್ ಶಫಿಕಖಾನ್ ನಿರ್ಣಾಯಕರಾಗಿ ಪಾಲ್ಗೊಳ್ಳುವರು. ಮಕ್ಕಳ ಅಕಾಡೆಮಿ ಅಧ್ಯಕ್ಷ ಡಾ. ರಾಜನ್ ದೇಶಪಾಂಡೆ ಅಧ್ಯಕ್ಷತೆ ವಹಿಸುವರು. ಗುಜ್ಜಾಡಿ ಸ್ವರ್ಣ ಜುವೆಲ್ಲರ್ಸ ವ್ಯವಸ್ಥಾಪಕ ನಿರ್ದೇಶಕ ಗುರುದತ್ತ ನಾಯಕ, ಕುಮಾರೇಶ್ವರ ಕಲ್ಚರಲ್ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಚಿಕ್ಕಮಠ, ಮಕ್ಕಳ ಅಕಾಡೆಮಿ ಕಾರ್ಯದರ್ಶಿ ಡಾ. ಎಂ.ವಾಯ್.ಸಾವಂತ, ಸಂಯೋಜಕ ಡಾ.ವಿಜಯ ತ್ರಾಸದ ಉಪಸ್ಥಿತರಿರುವರು.
ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ 18 ಯುವ ಪ್ರತಿಭಾನ್ವಿತ ಕಲಾವಿದರು ಧಾರವಾಡ ಐಡಲ್ ಗ್ರ್ಯಾಂಡ್ ಪಿನಾಲೆಯಲ್ಲಿ ಪಾಲ್ಗೊಳ್ಳುವರು. ವಿಜೇತರಿಗೆ ಧಾರವಾಡ ಐಡಲ್ ಗುಜ್ಜಾಡಿ ಸ್ವರ್ಣ ಟ್ರೋಫಿ ಪ್ರದಾನ ಮಾಡಲಾಗುವುದು. ಕಲಾಸಕ್ತರು, ಸಂಗೀತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕುಮಾರೇಶ್ವರ ಕಲ್ಚರಲ್ ಸೊಸೈಟಿ ಸಂಯೋಜಕ ಪ್ರಕಾಶ ಬಾಳಿಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 