ಧಾರವಾಡ ರಂಗಾಯಣ ನಿರ್ದೇಶಕ ದಿ. ರಾಜು ತಾಳಿಕೋಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ
Dharwad Rangayana Director D. Raju Talikoti's Last rites
ಧಾರವಾಡ ರಂಗಾಯಣ ನಿರ್ದೇಶಕ ದಿ. ರಾಜು ತಾಳಿಕೋಟಿ ಅವರ
ಪಾರ್ಥಿವ ಶರೀರದ ಅಂತಿಮ ದರ್ಶನ
ಧಾರವಾಡ 14: ರಂಗಭೂಮಿ ಕಲಾವಿದ ಹಾಗೂ ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ದಿ.ರಾಜು ತಾಳಿಕೋಟಿ ಅವರ ಪಾರ್ಥಿವ ಶರೀರಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಜ್ಯೋತಿ ಪಾಟೀಲ, ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಸಿಇಓ ಭುವನೇಶ ಪಾಟೀಲ ಅವರು ಪುಷ್ಪಾರ್ಚನೆ ಮಾಡಿ, ಅಂತಿಮ ನಮನ ಸಲ್ಲಿಸಿದರು.
ಇಂದು (14) ಬೆಳಿಗ್ಗೆ ನಗರದ ರಂಗಾಯಣದಲ್ಲಿ ರಂಗಾಯಣ ನಿರ್ದೇಶಕರಾಗಿದ್ದ ದಿ.ರಾಜು ತಾಳಿಕೋಟಿ ಅವರ ಪಾರ್ಥಿವ ಶರೀರದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ರಂಗಭೂಮಿ ಕಲಾವಿದರು, ಅಭಿಮಾನಿಗಳು ಹಾಗೂ ಸಾಂಸ್ಕೃತಿಕ ಕ್ಷೇತ್ರದ ಅನೇಕ ಗಣ್ಯರು, ಹಾಗೂ ಸಾರ್ವಜನಿಕರು ದಿ.ರಾಜು ತಾಳಿಕೋಟಿ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಧಾರವಾಡದ ವಿವಿಧ ರಾಷ್ಟ್ರೀಯ ಟ್ರಸ್ಟ್‌ಗಳ ಅಧ್ಯಕ್ಷರು, ಸದಸ್ಯರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ, ಧಾರವಾಡ ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ, ತಹಶೀಲ್ದಾರ ಡಾ. ಡಿ.ಎಚ್.ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಹಾಗೂ ರಂಗಾಯಣದ ಎಲ್ಲ ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 