ಧಾರವಾಡ ಗ್ರಾಮೀಣ ತಾಲೂಕಿನ ಮಹಾ ಪೋಷಕ-ಶಿಕ್ಷಕ ಮಹಾಸಭೆ

 ಧಾರವಾಡ ಗ್ರಾಮೀಣ ತಾಲೂಕಿನ ಮಹಾ ಪೋಷಕ-ಶಿಕ್ಷಕ ಮಹಾಸಭೆ  Dharwad Rural Taluk Maha Parent-Teacher Mahasabha

ಲೋಕದರ್ಶನ ವರದಿ 

ಧಾರವಾಡ ಗ್ರಾಮೀಣ ತಾಲೂಕಿನ ಮಹಾ ಪೋಷಕ-ಶಿಕ್ಷಕ ಮಹಾಸಭೆ   

  

ಧಾರವಾಡ  15: ಪೋಷಕ-ಶಿಕ್ಷಕರ ಮಹಾಸಭೆ ಸರ್ಕಾರಿ ಶಾಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಆಯೋಜಿಸಲಾಗುವ ಒಂದು ಶೈಕ್ಷಣಿಕ ಕಾರ್ಯಕ್ರಮವಾಗಿದೆ. ಇದನ್ನು ವಿದ್ಯಾರ್ಥಿಗಳ ಪ್ರಗತಿ, ಕಲಿಕಾ ಸವಾಲುಗಳು ಮತ್ತು ಪೋಷಕರು-ಶಿಕ್ಷಕರ ನಡುವಿನ ಸಹಯೋಗವನ್ನು ಸುಧಾರಿಸಲು ನಡೆಸಲಾಗುತ್ತದೆ. ಮುಂದುವರೆದ ಭಾಗವಾಗಿ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಧಾರವಾಡ ತಾಲೂಕಿನ 182 ಸರ್ಕಾರಿ ಶಾಲೆಗಳಲ್ಲಿ 14205 ಪೋಷಕರು, 1069 ಎಸ್‌.ಡಿ.ಎಮ.ಸಿ, ಸದಸ್ಯರು, 636 ಜನಪ್ರತಿನಿಧಿಗಳು, 1047 ಮುಖ್ಯಾಧ್ಯಾಪಕರು, ಶಿಕ್ಷಕರು ಈ ಮಹಾ ಪೋಷಕ-ಶಿಕ್ಷಕ ಮಹಾಸಭೆಯಲ್ಲಿ ಭಾಗಿದಾರರಾದರು. 

ಕರ್ನಾಟಕ ಘನ ಸರ್ಕಾರದ ಸಚಿವಾಲಯವು 'ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ' ಧ್ಯೇಯದಡಿ ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲೆಗಳು ಎಲ್ಲಾ ಅರ್ಹ ವಯಸ್ಸಿನ ಮಕ್ಕಳಿಗೆ ಒಳಗೊಳ್ಳುವಿಕೆ, ಪ್ರವೇಶಾವಕಾಶ ಮತ್ತು ಸಮಾನತೆಯ ಮೂಲಕ ಶಿಕ್ಷಣವನ್ನು ಒದಗಿಸುತ್ತವೆ. ಸರ್ಕಾರಿ ಶಾಲೆ ಎಸ್‌.ಡಿ.ಎಂ.ಸಿ. ಒಟ್ಟಾರೆ ಸಮುದಾಯದ ಹಿತಾಸಕ್ತಿಗಳ ಫಲಶ್ರುತಿಯಾಗಿವೆ. ಈ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಶಾಲಾ ಎಲ್ಲಾ ಪ್ರಮುಖ ಪಾಲುದಾರರನ್ನು ತಲುಪಲು ದಿನಾಂಕ: 14.11.2025ರಂದು ಮಕ್ಕಳ ದಿನಾಚಾರಣೆಯ ಪ್ರಯುಕ್ತ ರಾಜ್ಯಾದ್ಯಂತ ಏಕಕಾಲದಲ್ಲಿ 2025-26 ನೇ ಸಾಲಿನ ಪೋಷಕ-ಶಿಕ್ಷಕರ ಮಹಾಸಭೆಯನ್ನು ತಾಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಭಾಗವಹಿಸಿ ದಾಖಲಾತಿಯನ್ನು ಹೆಚ್ಚಿಸುವ ಮೂಲಕ ಸರ್ಕಾರಿ ಶಾಲಾ ಬಗ್ಗೆ ಪೋಷಕರಲ್ಲಿ ಭರವಸೆಯನ್ನು ಹೆಚ್ಚಿಸಿತು. 

ಪೋಷಕರು ಮತ್ತು ಶಿಕ್ಷಕರ ಸಹಯೋಗ: 

ಪೋಷಕರು ಮತ್ತು ಶಿಕ್ಷಕರ ನಡುವಿನ ಸಂವಹನವನ್ನು ಏರಿ​‍್ಡಸಲಾಯಿತು, ಇದರಿಂದ ಮಕ್ಕಳಿಗೆ ಉತ್ತಮ ಶೈಕ್ಷಣಿಕ ಬೆಂಬಲ. ವಿದ್ಯಾರ್ಥಿಗಳ ಶೈಕ್ಷಣಿಕ, ಭಾವನಾತ್ಮಕ ಮತ್ತು ಒಟ್ಟಾರೆ ಕಲಿಕೆಯ ಪ್ರಗತಿಯ ಸಮಗ್ರ ವರದಿಯನ್ನು ಪೋಷಕರಿಗೆ ಒದಗಿಸಲಾಯಿತು. 

ತಾಲೂಕಿನ ಎಲ್ಲ ಸರಕಾರಿ ಶಾಲಾ ಶಿಕ್ಷಕರು ಹಾಗೂ ಎಸ್‌.ಡಿ.ಎಂ.ಸಿ. ಪೋಷಕರನ್ನು ಶಾಲೆಗೆ ಆತ್ಮೀಯವಾಗಿ ಬರಮಾಡಿಕೊಂಡರು ಹಾಗೂ ಪರಿಚಯ ಮಾಡಿಕೊಟ್ಟರು. 

ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿ ನಡೆಸಲಾಗುತ್ತಿರುವ ಪಾಠ ಆಧಾರಿತ ಮೌಲ್ಯಮಾಪನದ (ಐಃಂ) ವಿಶ್ಲೇಷಣೆ ಬಗ್ಗೆ, ಪೋಷಕರಿಗೆ ಮಾಹಿತಿ ನೀಡಲಾಯಿತು. 

ಪ್ರೌಢಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಿದ್ಧತೆಗೆ ಅನುಕೂಲಿಸಲು ಇಲಾಖೆಯಿಂದ ನೀಡಲಾಗಿರುವ ಅಧ್ಯಾಯವಾರು, ವಿಷಯಾವಾರು ಮಾದರಿ ಪ್ರಶ್ನೆಪತ್ರಿಕೆಗಳು, ಮೌಲ್ಯಮಾಪನ ವಿಧಾನ, ನಡೆಸಲಾಗುತ್ತಿರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ಅಂತಿಮ ಪರೀಕ್ಷೆಗಳನ್ನು ನಡೆಸುತ್ತಿರುವ ಬಗ್ಗೆ, ಪೋಷಕರಿಗೆ ಶಿಕ್ಷಕರು ಮಾಹಿತಿ ನೀಡಿದರು. ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಆತಂಕ ನಿವಾರಣೆ, ಏಕಾಗ್ರತೆ, ಮಾನಸಿಕ ಒತ್ತಡ ನಿರ್ವಹಣೆಗಳ ಬಗ್ಗೆ ಕೆಲವು ಪ್ರೌಢಶಾಲೆಗಲ್ಲಿ ಉಪನ್ಯಾಸ  ಕಾರ್ಯಕ್ರಮಗಳನ್ನು ಏರಿ​‍್ಡಸಿ, ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರೊತ್ಸಾಹದಾಯಕ ಮಾತುಗಳನ್ನು ಹೇಳಿಸಿದರು. 

ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಕಲಿಕೆ ಉತ್ತಮಪಡಿಸಲು ಇಲಾಖೆಯಿಂದ ಹಮ್ಮಿಕೊಂಡಿರುವ ಕಲಿಕಾ ಉಪಕ್ರಮಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಯಿತು, ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಸರ್ಕಾರದಿಂದ ನೀಡಲಾಗುತ್ತಿರುವ ಪ್ರೋತ್ಸಾಹದಾಯಕ ಯೋಜನೆಗಳ ಬಗ್ಗೆ, ಪೋಷಕರಿಗೆ ಮಾಹಿತಿ ನೀಡಲಾಯಿತು. ಶಾಲೆಗಳಲ್ಲಿ ಲಭ್ಯಗೊಳಿಸಿರುವ ಭೌತಿಕ ಸೌಕರ್ಯಗಳು ಮತ್ತು ಶೈಕ್ಷಣಿಕ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಬೇಡಿಕೆಯನ್ನು ಪಡೆದುಕೊಳ್ಳಲಾಯಿತು. 

ವಿದ್ಯಾರ್ಥಿಗಳ ಆರೋಗ್ಯ ಪೋಷಣೆ ಮತ್ತು ಕಲಿಕಾ ಪ್ರಗತಿಯಲ್ಲಿ ಪೋಷಕರ ಜವಾಬ್ದಾರಿ ಮತ್ತು ಭಾಗವಹಿಸುವಿಕೆಯ ಬಗ್ಗೆ ಅರಿವು ಮತ್ತು ವಿದ್ಯಾರ್ಥಿಗಳ ಹಾಜರಾತಿ ಮತ್ತು ಶೈಕ್ಷಣಿಕ ಪ್ರಗತಿಯನ್ನು ಪೋಷಕರೊಂದಿಗೆ ಹಂಚಿಕೊಳ್ಳುಲಾಯಿತು. 

ಪೋಷಕರು, ಶಿಕ್ಷಕರು ಮತ್ತು ಗ್ರಾಮ ಪಂಚಾಯತ್ ಆಡಳಿತದ ಸಹಯೋಗದಿಂದ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ, ಶಾಲೆಯ ಅವಶ್ಯಕತೆಗಳು, ಸವಾಲುಗಳು ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಪೋಷಕರ ನೀರೀಕ್ಷೆ, ಸಹಕಾರ ಮತ್ತು ಸಲಹೆಗಳನ್ನು ಸಂಗ್ರಹಿಸಲಾಯಿತು. 

ಕೆ.ಪಿ.ಎಸ್, ಪಿ.ಎಂ.ಶ್ರೀ ಹಾಗೂ ಆಯ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆರಂಭಿಸಿರುವ ದ್ವಿಭಾಷಾ ಮಾಧ್ಯಮ ತರಗತಿಗಳು ಮತ್ತು ಪೂರ್ವ ಪ್ರಾಥಮಿಕ ತರಗತಿಗಳ (ಇಅಅಇ) ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಲಾಯಿತು. 

ಹೆಚ್ಚು ದಾಖಲಾತಿ ಹೊಂದಿರುವ ಸರ್ಕಾರಿ ಶಾಲಾ-ಕಾಲೇಜುಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಿ ಹೆಚ್ಚುವರಿ ಅನುದಾನ ನೀಡಿ ಅಭಿವೃದ್ಧಿಪಡಿಸುತ್ತಿರುವ ಬಗ್ಗೆ, ಶಿಕ್ಷಕರು ಪಾಲಕರಿಗೆ ಮಾಹಿತಿ ನೀಡಿದರು. 

ಇಲಾಖೆಯು ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಯೋಗದೊಂದಿಗೆ ವಾರಕ್ಕೆ 06 ದಿನಗಳು ಮೊಟ್ಟೆ/ಬಾಳೆಹಣ್ಣು ಮತ್ತು ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್‌ ಸಹಯೋಗದೊಂದಿಗೆ ವಾರಕ್ಕೆ 05 ದಿನಗಳು ಸಾಯಿ ಶೂರ್ ರಾಗಿ ಹೆಲ್ತ್‌ ಮಿಕ್ಸ್‌ ಪುಡಿಯನ್ನು ಹಾಲಿನೊಂದಿಗೆ ಮಿಶ್ರ ಮಾಡಿ ನೀಡುತ್ತಿರುವ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. 

ಮಕ್ಕಳ ಹಕ್ಕುಗಳು, ಆರ್‌.ಟಿ.ಇ. ಕಾಯ್ದೆ, ವಿಶೇಷ ಅಗತ್ಯತೆಯುಳ್ಳ ಮಕ್ಕಳ ಶಿಕ್ಷಣ. ಮಕ್ಕಳ ರಕ್ಷಣಾ ನೀತಿ ಮತ್ತು ಕಓಅಖಓ ಕಾಯ್ದೆ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಲಾಯಿತು. 

ಮಕ್ಕಳು ಶಾಲೆಯಿಂದ ಹೊರಗುಳಿಯುವ/ಗೈರುಹಾಜರಾಗುವ, ಬಾಲ ಕಾರ್ಮಿಕರು ಮತ್ತು ಬಾಲ್ಯ ವಿವಾಹಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೋಷಕರ ಜವಾಬ್ದಾರಿಗಳ ಬಗ್ಗೆ ಅರಿವು ಮೂಡಿಸಲಾಯಿತು. 

ಪೋಷಕರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅಗತ್ಯತೆಗನುಸಾರವಾಗಿ ಶಾಲಾಭಿವೃದ್ಧಿ/ಶಾಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು. 

ತಾಲ್ಲೂಕು ಹಂತದ ಕ್ಷೇತ್ರ ಮಟ್ಟದಲ್ಲಿ ಎಲ್ಲಾ ಬಿಇಓ, ಬಿಆರಸಿ, ಸಿಆರಪಿ, ಬಿಅರಪಿ, ಇಸಿಒ, ಬಿಆಯಇಆರಟಿ ತಮ್ಮ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಕಾರ್ಯಕ್ರಮದ ಅನುಷ್ಠಾನವನ್ನು ಪರೀಶೀಲಿಸಿದರು ಹಾಗೂ ಪೋಷಕರೊಂದಿಗೆ ಚರ್ಚೆಯಲ್ಲಿ ಭಾಗವಹಿಸಿದರು. 

ಎಲ್ಲಾ ಶಾಲೆಗಳಲ್ಲಿ ಪೋಷಕರ ಮಹಾಸಭೆಯಲ್ಲಿ ಭಾಗವಹಿಸಿದ ಪೋಷಕರ ವಿವರ ಮತ್ತು ಅವರು ನೀಡಿರುವ ಸಲಹೆಗಳ ಮಾಹಿತಿಯನ್ನು ಠರಾವು ವಹಿಯಲ್ಲಿ ನಿರ್ವಹಿಸಿದರು. 

ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಸಹಕಾರ, ರಕ್ಷಣೆ ಜೊತೆಗೆ ಉತ್ತಮ ಶಿಕ್ಷಣ ದೊರಕಿಸುವ ಹಾಗೂ ಜಾಗತಿಕ ಮಟ್ಟದಲ್ಲಿ ಉತ್ತಮ ವೇದಿಕೆ ಕಲ್ಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ತಿಳಿಸಿದರು. 


ಶುಕ್ರವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಭಾರತ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಜನ್ಮ ದಿನಾಚರಣೆ ಅಂಗವಾಗಿ ಧಾರವಾಡ ತಾಲೂಕಿನ ಕಲಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಹಾಗೂ ಪೋಷಕ ಶಿಕ್ಷಕರ ಮಹಾಸಭೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಮಕ್ಕಳು ದೇಶದ ಆಸ್ತಿಯಾಗಿದ್ದು, ಮಕ್ಕಳನ್ನು ಜಾಗತಿಕ ಮಟ್ಟದಲ್ಲಿ ಒಳ್ಳೆಯ ಪ್ರಜೆಗಳನ್ನಾಗಿ ಮಾಡುವ ಹೊಣೆ ಶಿಕ್ಷಕರ ಹಾಗೂ ಪೋಷಕರ ಮೇಲೆ ಇದೆ ಎಂದ ಅವರು, ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಹಾಗೂ ಸೃಜನಶೀಲ ಪಠ್ಯೇತರ ಚಟುವಟಿಕೆಗಳ ಕಡೆ ಹೆಚ್ಚಿನ ಗಮನಹರಿಸಿ, ಉತ್ತಮ ಪ್ರಜೆಗಳಾಗಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಅದೇರೀತಿ ಸರಕಾರಿ ಪ್ರಾಥಮಿಕ ಶಾಲೆ ಮುರಕಟ್ಟಿಯಲ್ಲಿ ಮಾತನಾಡುತ್ತಾ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃಧಿ ಸಾಧಿಸುವ ಕುರಿತು ಮಾಹಿತಿ ನೀಡಿದ ಅವರು, ಸರಕಾರದಿಂದ ಲಭ್ಯವಿರುವ ಸವಲತ್ತುಗಳ ವಿವರಗಳನ್ನು ಪೋಷಕರಿಗೆ ತಿಳಿಸಿ, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. 

ಕಲಕೇರಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಕೇತ್ರ ಸಮನ್ವಯಾಧಿಕಾರಿ ಕುಮಾರ ಕೆ. ಎಫ್ ಮಾತನಾಡುತ್ತಾ ಮಕ್ಕಳಲ್ಲಿ ಬಡವ ಶ್ರೀಮಂತನೆಂದು ಯಾವುದೇ ತಾರತಮ್ಯ ಬರಬಾರದು. ನಾವೆಲ್ಲ ಸಮಾನರು ಎಂಬ ಭಾವನೆ ಮೂಡಬೇಕು. ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳು ಚೆನ್ನಾಗಿ ಓದಿ ಉನ್ನತ ಮಟ್ಟಕ್ಕೆ ತಲುಪಬೇಕು. ಹಾಗಾಗಿ ಸರ್ಕಾರ ಉಚಿತ ಪುಸ್ತಕ, ಯೂನಿಫಾರ್ಮ್‌, ಶೂ, ಊಟ ನೀಡುವ ಮೂಲಕ ಪ್ರೋತ್ಸಾಹ ನೀಡುತ್ತಿದೆ ಎಂದರು. 

ಎಸ್‌.ಡಿ.ಎಂ.ಸಿ. ಪೋಷಕರುಗಳು, ವಿದ್ಯಾರ್ಥಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು  ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಸಹಶಿಕ್ಷಕ ವಂದಿಸಿದರು.