ಇಂದು ಧಾರವಾಡ ಜಿಲ್ಲಾ ಪಂಚಾಯತ ಕೆಡಿಪಿ ಸಭೆ
Dharwad Zilla Panchayat KDP meeting today
ಧಾರವಾಡ 26: 2025-26 ನೇ ಸಾಲಿನ ಮಾರ್ಚ 2026 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ನಾಲ್ಕನೇಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆಯನ್ನು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಏಪ್ರೀಲ್ 27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಗೆ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 28 ರಂದು ಕುಂದಗೋಳ ಪಟ್ಟಣದಲ್ಲಿ ಜಿಲ್ಲಾಮಟ್ಟದ ಜನ ಸಂಪರ್ಕ ಸಭೆ: ಜಿಲ್ಲಾಡಳಿತದಿಂದ ಏಪ್ರಿಲ್ 28 ರಂದು ಬೆಳಿಗ್ಗೆ 11 ಗಂಟೆಗೆ ಕುಂದಗೋಳ ಪಟ್ಟಣದ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಸದರಿ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಹವಾಲು, ಸಮಸ್ಯೆ, ದೂರುಗಳನ್ನು ಸಲ್ಲಿಸಿ, ಪರಿಹರಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 