ಧುಪದಾಳ ಜಲಾಶಯ ಭರ್ತಿ: ಘಟಪ್ರಭಾ ಕಾಲುವೆಗೆ 2,000 ಕ್ಯೂಸೆಕ್ ನೀರು ಬಿಡುಗಡೆ
Dhupadala Reservoir Full: 2,000 Cusecs of Water Released into Ghataprabha Canal
ಬೆಳಗಾವಿ 06: ಜಿಲ್ಲೆಯಲ್ಲಿನ ಮಳೆಯ ಕೊರತೆ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಘಟಪ್ರಭಾ ಸಮೀಪದ ಧುಪದಾಳ ಜಲಾಶಯಕ್ಕೆ ಭೇಟಿ ನೀಡಿ ನೀರಿನ ಮಟ್ಟ, ಒಳಹರಿವು ಹಾಗೂ ನಿರ್ವಹಣೆಯ ಸ್ಥಿತಿಗತಿಗಳನ್ನು ಪರೀಶೀಲಿಸಿದರು. ಪರೀಶೀಲನೆ ಬಳಿಕ ಮಾತನಾಡಿದ ಅವರು, ಮುಂಗಾರು ವಿಳಂಬದಿಂದ ರೈತರು ಮತ್ತು ಸಾರ್ವಜನಿಕರಲ್ಲಿ ಉಂಟಾಗಿದ್ದ ಆತಂಕ ಇದೀಗ ಕಡಿಮೆಯಾಗತೊಡಗಿದೆ ಎಂದರು. ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿರುವ ಪರಿಣಾಮ ಹಿರಣ್ಯಕೇಶಿ ಹಾಗೂ ಘಟಪ್ರಭಾ ನದಿಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚಿದ್ದು, ಧುಪದಾಳ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪ್ರಸ್ತುತ ಸುಮಾರು 8 ಸಾವಿರ ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ ಎಂದು ತಿಳಿಸಿದರು.
ಜಲಾಶಯಕ್ಕೆ ಹರಿದುಬರುತ್ತಿರುವ ಹೆಚ್ಚುವರಿ ನೀರನ್ನು ಘಟಪ್ರಭಾ ನದಿಗೆ ಬಿಡುಗಡೆ ಮಾಡಲಾಗುತ್ತಿದ್ದು, ಇದರ ಪರಿಣಾಮ ಬೆಳಗಾವಿಯಿಂದ ಬಾಗಲಕೋಟೆಯವರೆಗೆ ನದಿಯ ಹರಿವು ಸುಧಾರಿಸಿದೆ. ಈಗಾಗಲೇ ಬಾಗಲಕೋಟೆ ಜಿಲ್ಲೆಗೆ ನೀರು ತಲುಪಿದೆ ಎಂದು ಅವರು ಹೇಳಿದರು. ರೈತರ ಹಿತದೃಷ್ಟಿಯಿಂದ ಭಾನುವಾರ ಬೆಳಿಗ್ಗೆಯಿಂದಲೇ ಘಟಪ್ರಭಾ ಎಡದಂಡೆ ಕಾಲುವೆಗೆ 1,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಸಂಜೆ ವೇಳೆಗೆ ಅದನ್ನು 2,000 ಕ್ಯೂಸೆಕ್ಗೆ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರಿಂದ ಸುಮಾರು 2 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಸಚಿವರು ತಿಳಿಸಿದರು.
ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣದ ಬಗ್ಗೆ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಆದ್ದರಿಂದ ರೈತರು ಲಭ್ಯವಿರುವ ನೀರನ್ನು ಮಿತವಾಗಿ ಹಾಗೂ ಸಮರ್ಕವಾಗಿ ಬಳಸಿಕೊಂಡು ನೀರಿನ ಸದ್ಬಳಕೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ನೀರಾವರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ನಿರಂತರ ನಿಗಾ ವಹಿಸಿ, ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದುಂಡಪ್ಪಾ ಜೋಕನಟ್ಟಿ, ನೀರಾವರಿ ಮಹಾಮಂಡಳದ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ರೆಹಮಾನ್ ಮೊಕಾಶಿ, ರವಿ ನಾವಿ, ರಾಜು ವಗ್ಗಣ್ಣವರ, ಶಿವು ಪಾಟೀಲ, ಮಹೇಶ ಚಿಕ್ಕೋಡಿ, ಬಸು ನಾಡಗೇರ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 