ಡಿಜಿಟಲ್ ಕ್ರಾಂತಿ: ದೇಶದಲ್ಲೇ ಮತ್ತಿಕೊಪ್ಪ ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರಕ್ಕೆ ಪ್ರಥಮ ಸ್ಥಾನ
Digital Revolution: Mattikoppa KLE Krishi Vigyan Kendra Secures First Place in the Country
ಲೋಕದರ್ಶನ ವರದಿ
ಬೆಳಗಾವಿ, ಜುಲೈ 16: ಐಸಿಎಆರ್- ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ), ಮತ್ತಿಕೊಪ್ಪ, ಬೆಳಗಾವಿ ಋ ವತಿಯಿಂದ ಐಸಿಎಆರ್- ಸಿಎಸ್‌ಆರ್ ಸಮಾವೇಶ 2026ರ ಅಂಗವಾಗಿ ಜುಲೈ 15ರಂದು ಕಿಸಾನ್ ಸಾರಥಿ ಮೊಬೈಲ್ ಆ್ಯಪ್ ಮೂಲಕ ಆಯೋಜಿಸಲಾದ ರಾಷ್ಟ್ರವ್ಯಾಪಿ ರೈತರ ತ್ವರಿತ ಆನ್‌ಲೈನ್ ಪ್ರತಿಕ್ರಿಯೆ ಸಮೀಕ್ಷೆಯಲ್ಲಿ 1,600ಕ್ಕೂ ಹೆಚ್ಚು ರೈತರನ್ನು ನೋಂದಾಯಿಸಿ ದೇಶದಲ್ಲಿಯೇ ಅತಿ ಹೆಚ್ಚು ರೈತರ ಭಾಗವಹಿಸುವಿಕೆ ದಾಖಲಿಸಿದ ಕೃಷಿ ವಿಜ್ಞಾನ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ರೈತರಿಗೆ ಕಿಸಾನ್ ಸಾರಥಿ ಆ್ಯಪ್ ಡೌನ್‌ಲೋಡ್, ನೋಂದಣಿ ಹಾಗೂ ಸಮೀಕ್ಷೆಯಲ್ಲಿ ಭಾಗವಹಿಸಲು ಮಾರ್ಗದರ್ಶನ ನೀಡುವ ಮೂಲಕ ಈ ಸಾಧನೆ ಸಾಧ್ಯವಾಯಿತು. ಈ ರಾಷ್ಟ್ರಮಟ್ಟದ ಸಾಧನೆಗಾಗಿ ಕೆಎಲ್‌ಇ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಪ್ರಭಾಕರ ಕೋರೆ, ಅಧ್ಯಕ್ಷ ಅಮಿತ್ ಪಿ. ಕೋರೆ, ಕೃಷಿ ವಿಜ್ಞಾನ ಕೇಂದ್ರದ ಅಧ್ಯಕ್ಷ ಬಿ.ಆರ್. ಪಾಟೀಲ ಹಾಗೂ ಐಸಿಎಆರ್ ಅಟಾರಿ ಬೆಂಗಳೂರಿನ ನಿರ್ದೇಶಕ ಡಾ. ಪ್ರಭಾಕರ ಮತ್ಯಮ್ ಅವರು ಕೇಂದ್ರದ ವಿಜ್ಞಾನಿಗಳು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು.
ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿ ಅವರು ರೈತರಿಗೆ ಕಿಸಾನ್ ಸಾರಥಿ ಆ್ಯಪ್‌ನ ಉಪಯೋಗ, ನೋಂದಣಿ ಹಾಗೂ ಸ್ಥಳೀಯ ಭಾಷೆಯಲ್ಲಿ ಲಭ್ಯವಿರುವ ವೈಜ್ಞಾನಿಕ ಕೃಷಿ ಸಲಹೆಗಳ ಕುರಿತು ಮಾಹಿತಿ ನೀಡಿ, ಪ್ರಾಯೋಗಿಕ ತರಬೇತಿ ನೀಡಿದರು. ವಿಜ್ಞಾನಿಗಳಾದ ಡಾ. ಎಸ್.ಎಸ್. ಹಿರೇಮಠ, ಎಸ್.ಎಂ. ವಾರದ, ಜಿ.ಬಿ. ವಿಶ್ವನಾಥ, ಪ್ರವೀಣ ಯಡಹಳ್ಳಿ, ಡಾ. ಭಾವಿನಿ ಪಾಟೀಲ, ಡಾ. ಗುರುರಾಜ ಕೌಜಲಗಿ ಹಾಗೂ ತಾಂತ್ರಿಕ ಸಿಬ್ಬಂದಿಗಳಾದ ಶಂಕರಗೌಡ ಪಾಟೀಲ, ವಿನೋದ ಕೋಚಿ ಮತ್ತು ಮಂಜುನಾಥ ಪಿ.ಐ. ಅವರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 