ಜಗಜ್ಯೋತಿ ಬಸವೇಶ್ವರ ಅವರ ಪ್ರತಿಮೆಗೆ ಗಣ್ಯರಿಂದ ಮಾಲಾರೆ್ಣ
Dignitaries garland the statue of Jagajyoti Basaveshwara
ಹುಬ್ಬಳ್ಳಿ 25: ಸಮಾನತೆಯ ಹರಿಕಾರ, ಮಹಾ ಮಾನವತಾವಾದಿ, ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಶ್ರೀ ಬಸವಣ್ಣನವರ ಜಯಂತ್ಯೋತ್ಸವದ ಶುಭ ಸಂದರ್ಭದಲ್ಲಿ ಇಂದಿರಾ ಗಾಜಿನ ಮನೆಯಲ್ಲಿರುವ ಜಗಜ್ಯೋತಿ ಬಸವೇಶ್ವರ ಅವರ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡುವ ಮೂಲಕ ಗೌರವ ಅರೆ್ಣ ಮಾಡಿ, ಭಕ್ತಿ ಪೂರ್ವಕ ನಮನಗಳನ್ನು ಸಲ್ಲಿಸಲಾಯಿತು ಬಸವಣ್ಣನವರು ಹಲವಾರು ಶರಣರನ್ನು ಸೇರಿಸಿಕೊಂಡು ವಚನ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು.
ವಿಧಾನ ಪರಿಷತ್ ಮಾಜಿ ಸದಸ್ಯರು, ಖ್ಯಾತ ನ್ಯಾಯವಾದಿ ಮೋಹನ್ ಲಿಂಬಿಕಾಯಿ ಅವರು ಮಾತನಾಡಿ ಬಸವಣ್ಣನವರ ಕಾಯಕ, ದಾಸೋಹ, ಸಮಾನತೆ, ಸ್ತ್ರೀ ಸ್ವಾತಂತ್ರ್ಯ , ಮುಂತಾದ ತತ್ವಗಳನ್ನು ಎಲ್ಲರೂ ಪಾಲಿಸಿದರೆ ಸೌಹಾರ್ಧತೆ ಹಾಗೂ ನೆಮ್ಮದಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಾಕರಸಾ ನಿಗಮದ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ ಪ್ರೊ ಎಸ್.ಎಂ.ಸಾತ್ಮಾರ, ಸೋಹನ್ ಸುರೇಶ್ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ದುರೀಣರಾದ ಈರ್ಪ ಎಮ್ಮಿ, ಚನ್ನಬಸಪ್ಪ ಧಾರವಾಡಶೆಟ್ಟರ, ಮೃತ್ಯುಂಜಯ ಮಟ್ಟಿ, ಪ್ರಭು ಶೆಟ್ಟರ್ , ವಿನಯ್ ಹುಲ್ಲೂರು, ರಮೇಶ್ ಯಾದವಾಡ , ಭಾರತಿ ವಾಲಿ, ನವೀನ್ ಲಿಂಬಿಕಾಯಿ, ಕುಂಬಿ , ಮನೋಹರ್ ಜಮಖಂಡಿ , ಸಂಗಮೇಶ ಐಹೋಳ್ಳಿ, ಮುಂತಾದವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 