ಬೆಂಗಳೂರು, ಆ 8 ರಾಜ್ಯದ ವಿವಿದೆಡೆ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಪ್ರವಾಹಪೀಡಿತ ಜಿಲ್ಲೆಗಳ ಜನರ ರಕ್ಷಣೆಗೆ ಪಕ್ಷದ ಕಾರ್ಯಕರ್ತರು ನೆರವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ ರಾಜ್ಯದ 15 ಜಿಲ್ಲೆಗಳಲ್ಲಿ ನೆರೆ ಉಂಟಾದ ಪರಿಣಾಮ ಹಳ್ಳಿಗಳು ಮುಳುಗಿವೆ, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ರೈತರು, ಜಾನುವಾರುಗಳು ಸಂಕಷ್ಟದಲ್ಲಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇಂತಹ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರ ಸಹಾಯಕ್ಕೆ ಧಾವಿಸುವುದು ನಮ್ಮೆಲ್ಲರ ಜವಾಬ್ದಾರಿ. ಪಕ್ಷದ ಕಾರ್ಯಕರ್ತರು ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯಗಳಲ್ಲಿ ತೊಡಗುವಂತೆ ಅವರು ಟ್ವೀಟ್ ಮಾಡಿದ್ದಾರೆ ಈಗಾಗಲೇ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಹೆಚ್. ಕೆ. ಪಾಟೀಲ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ನೇತೃತ್ವದಲ್ಲಿ ನೆರೆಪೀಡಿತ ಪ್ರದೇಶಗಳ ವೀಕ್ಷಣೆಗೆ ಎರಡು ತಂಡ ರಚಿಸಲಾಗಿದ್ದು, ಶುಕ್ರವಾರದಿಂದ ಈ ತಂಡಗಳು ಪ್ರವಾಸ ಆರಂಭಿಸಲಿವೆ.