ಚಿಕ್ಕಬಳ್ಳಾಪುರ, ಅ 19: ರಾಜ್ಯದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ ಗುಂಡೂರಾವ್ ಪದಗ್ರಹಣ ಮಾಡಿದ ನಂತರ ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಮರಣಶಯ್ಯೆಯಲ್ಲಿದೆ ಎಂದು ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಡಾ.ಕೆ. ಸುಧಾಕರ್ ಟೀಕಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಗ್ರಾಮದಲ್ಲಿ ನೂತನ ಐಟಿಐ ಕಾಲೇಜು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಪಕ್ಷದ ನೊಗ ಹೊತ್ತ ಬಳಿಕವೇ ರಾಜ್ಯದಲ್ಲಿ ಕಾಂಗ್ರೆಸ್ ಸತ್ತು ಹೋಯಿತು ಎಂದರು.
ಐದು ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷ ದುಸ್ತಿಗೆ ಬಂದಿದೆ. ಕಳೆದ ವಿಧಾನಸಭೆಯಲ್ಲಿ 127 ಇದ್ದ ಶಾಸಕರ ಸಂಖ್ಯೆ ಈಗ 78 ಕ್ಕೆ ಕುಸಿದಿದೆ. ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾದ ಮೇಲೆ ಲೋಕಸಭಾ ಚುನಾವಣೆಯಲ್ಲಿ 1 ಸ್ಥಾನಕ್ಕೆ ಕುಸಿದಿದೆ ಎಂದರು.
ದಿನೇಶ್ ಗುಂಡೂರಾವ್ ಮೊದಲು ತಮ್ಮ ಯೋಗ್ಯತೆಯನ್ನು ಅರಿಯಲಿ. ಅಧ್ಯಕ್ಷರಾಗಿ ಹೇಗೆ ಇರಬೇಕು. ಹೇಗೆ ಕಾರ್ಯ ನಿರ್ವಹಿಸಬೇಕು, ಯಾವ ರೀತಿ ಮಾತನಾಡಬೇಕು ಎಂಬುದನ್ನು ತಿಳದುಕೊಳ್ಳಲಿ. ಅವರಿಂದಲೇ ರಾಜ್ಯದಲ್ಲಿ ಪಕ್ಷ ಆಧೋಗತಿಗೆ ಇಳಿಯಿತು. ಯಡಿಯೂರಪ್ಪ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ ಎಂದು ದಿನೇಶ್ ಗುಂಡೂರಾವ್ ವಿರುದ್ದ ಅನರ್ಹ ಶಾಸಕ ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಬಿಜೆಪಿ ಸಕರ್ಾರ ಸತ್ತು ಹೋಗಿದೆ. ರಾಜ್ಯ ಸಕರ್ಾರ ಕೇಂದ್ರದಿಂದ ನೆರೆ ಪರಿಹಾರ ತರುವಲ್ಲಿ ವಿಫಲವಾಗಿದೆಯೆಂಬ ದಿನೇಶ್ ಗುಂಡೂರಾವ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾದ ಮೇಲೆಯೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಗತಿ ಬಂದಿದೆ ಎಂದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸಕರ್ಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಯಾವುದೇ ಸಕರ್ಾರವನ್ನು ಎರಡು ತಿಂಗಳಲ್ಲಿ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ. ಹಾಲಿ ಸಕರ್ಾರಕ್ಕೆ ಸ್ವಲ್ಪ ಕಾಲಾವಕಾಶ ನೀಡುವ ಅಗತ್ಯವಿದೆ ಎಂದರು.