ನೇರ ಫೋನ್-ಇನ್ ಕಾರ್ಯಕ್ರಮ
Direct phone-in program: 19 Sep
ಬೆಳಗಾವಿ 17: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ವಿಶ್ವವಿದ್ಯಾಲಯ ಬೆಳಗಾವಿ ಮತ್ತು ಕೆಎಲ್‌ಇ ಸಂಸ್ಥೆಯ ಶ್ರೀ ಬಿ. ಎಮ್. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಬೆಳಗಾವಿ ಇವರ ಸಹಯೋಗದಲ್ಲಿ ಶುಕ್ರವಾರ ದಿನಾಂಕ 19ನೆ ಸೆಪ್ಟೆಂಬರ್ 2025 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ ವಿಶ್ವ ಆಲ್ಝೈಮರ್ಸ ದಿನ ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗಾವಿಯ ಕೆಎಲ್‌ಇ ಶ್ರೀ ಬಿ. ಎಮ್. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಮತ್ತು ಪ್ರಾಚಾರ್ಯರಾದ ಡಾ. ಸುಹಾಸ ಕುಮಾರ ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು 9019904904 ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ರೇಡಿಯೋ ಈಗ ಮೊಬೈಲ್ ಆಫ್‌ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ್ ಜಲಾಲಪೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 