ನೇರ ಫೋನ್-ಇನ್ ಕಾರ್ಯಕ್ರಮ: ಜಾಗೃತಿ
Direct phone-in program: Awareness
ನೇರ ಫೋನ್-ಇನ್ ಕಾರ್ಯಕ್ರಮ: ಜಾಗೃತಿ
ಬೆಳಗಾವಿ 10: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬುಧವಾರ ದಿ. 10ರಂದು ಬೆಳಗ್ಗೆ 10 ರಿಂದ 11ಗಂಟೆವರೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಮನೋವೈದ್ಯ ಡಾ. ಭೀಮಸೇನ್ ಟೆಕ್ಕಳಕಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶ್ವ ಆತ್ಮಹತ್ಯೆ ತಡೆ ದಿನದ ಕುರಿತು ಜಾಗೃತಿ ಮೂಡಿಸಿದರು.
ಪ್ರತಿ ವರ್ಷ ಸೆಪ್ಟೆಂಬರ್ 10ರಂದು ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತದೆ, ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟುವ ಕುರಿತಾಗಿ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಆತ್ಮಹತ್ಯೆಗೆ ಕಾರಣಗಳು, ಯಾವ ವಯೋಮಾನದವರಲ್ಲಿ ಹೆಚ್ಚು ಕಂಡುಬರುತ್ತದೆ, ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿಯ ಮೂನ್ಸೂಚನೆಗಳು, ಆತ್ಮಹತ್ಯೆ ಪ್ರವೃತ್ತಿಯನ್ನು ಹೇಗೆ ನಿಯಂತ್ರಿಸಬಹುದು. ಸೋಶಿಯಲ್ ಮೀಡಿಯಾ ಮತ್ತು ಆನ್‌ಲೈನ್ ಗೇಮ್‌ಗಳಿಂದ ಯುವ ಜನತೆ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಇದರಿಂದ ಹೇಗೆ ಹೊರಬಹುದು ಹಾಗೂ ಆತ್ಮಹತ್ಯೆಗೆ ಯತ್ನಿಸುವವರು ಮನೋವೈದ್ಯರ ಸಮಾಲೋಚನೆ ಪಡೆಯುವುದರ ಕುರಿತು ಜಾಗೃತಿ ಮೂಡಿಸಿದರು.
ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಮನೋರೋಗ ವಿಭಾಗದಲ್ಲಿ ಲಭ್ಯವಿರುವ ಚಿಕಿತ್ಸೆ, ಸೌಲಭ್ಯಗಳ ಕುರಿತು ತಿಳಿಸಿದರು. ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 