ಆರೋಗ್ಯ ಸಂಜೀವಿನಿ ಯೋಜನೆಗೆ ಹೆಚ್ಚಿನ ಆಸ್ಪತ್ರೆಗಳ ನೋಂದಣಿಗೆ ಸೂಚನೆ
Directive to register more hospitals for the Arogya Sanjeevini scheme
ಲೋಕದರ್ಶನ ವರದಿ
ಧಾರವಾಡ 27 : ಜಿಲ್ಲೆಯಲ್ಲಿ ಈಗಾಗಲೇ 24 ಆಸ್ಪತ್ರೆಗಳು ಎಬಿ-ಆರ್ಕೆ ಯೋಜನೆಯಡಿ ನೋಂದಣಿಯಾಗಿದ್ದು, ಈ ಪೈಕಿ 20 ಆಸ್ಪತ್ರೆಗಳು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಲ್ಲಿಯೂ ನೋಂದಣಿಯಾಗಿವೆ. ಬಾಕಿ ಇರುವ ನಾಲ್ಕು ಆಸ್ಪತ್ರೆಗಳು ಶೀಘ್ರ ನೋಂದಣಿಯಾಗಬೇಕು. ಅರ್ಹತೆ ಹೊಂದಿರುವ ಇತರ ಆಸ್ಪತ್ರೆಗಳನ್ನೂ ಯೋಜನೆಯಡಿ ಸೇರೆ್ಡಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚಿಸಿದರು.
ನಗರದ ನೂತನ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಟ್ರಸ್ಟ್ನ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಯೋಜನೆಯಡಿ ಈ ಹಿಂದೆ ನಿಗದಿಪಡಿಸಿದ್ದ ಚಿಕಿತ್ಸಾ ದರಗಳು ಹಾಗೂ ಪಾವತಿ ಪ್ರಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಕೆಲವು ಆಸ್ಪತ್ರೆಗಳು ನೋಂದಣಿಗೆ ಹಿಂದೇಟು ಹಾಕುತ್ತಿದ್ದವು. ಇದೀಗ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲಾಗಿದ್ದು, ಸಿಜಿಎಚ್ಎಸ್ ದರಗಳಿಗೆ ಅನುಗುಣವಾಗಿ ಪಾವತಿ ದರ ನಿಗದಿಪಡಿಸಲಾಗಿದೆ. ಇದರಿಂದ ಆಸ್ಪತ್ರೆಗಳಿಗೆ ಅನುಕೂಲವಾಗಲಿದ್ದು, ಹೆಚ್ಚಿನ ಆಸ್ಪತ್ರೆಗಳು ಯೋಜನೆಯಡಿ ನೋಂದಣಿಯಾಗುವ ನೀರೀಕ್ಷೆಯಿದೆ ಎಂದರು.
ಧಾರವಾಡ ಜಿಲ್ಲೆಯಲ್ಲಿ 15 ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರಿದ್ದು, ನೆರೆಯ ಜಿಲ್ಲೆಗಳ ಅನೇಕ ಸರ್ಕಾರಿ ನೌಕರರೂ ಚಿಕಿತ್ಸೆಗೆ ಧಾರವಾಡದ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ. ಹೀಗಾಗಿ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಹೆಚ್ಚಿನ ಆಸ್ಪತ್ರೆಗಳು ಯೋಜನೆಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಹುಬ್ಬಳ್ಳಿ ಐಎಂಎ ಅಧ್ಯಕ್ಷ ಡಾ. ಬಸವರಾಜ ಸರ್ಜನ್ ಮಾತನಾಡಿ, ಪರಿಷ್ಕೃತ ಚಿಕಿತ್ಸಾ ದರಗಳು ಜಾರಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನರ್ಸಿಂಗ್ ಹೋಮ್ಗಳು ಹಾಗೂ ವೈದ್ಯಕೀಯ ಸಂಸ್ಥೆಗಳನ್ನು ಯೋಜನೆಯಡಿ ನೋಂದಾಯಿಸಬೇಕು ಎಂದು ಮನವಿ ಮಾಡಿದರು.
ಹುಬ್ಬಳ್ಳಿಯಲ್ಲಿ ಸುಮಾರು 18 ನರ್ಸಿಂಗ್ ಹೋಮ್ಗಳು ಸೂಪರ್ ಸ್ಪೆಷಾಲಿಟಿ ಹಾಗೂ ಸ್ಪೆಷಾಲಿಟಿ ಚಿಕಿತ್ಸಾ ಸೌಲಭ್ಯ ಹೊಂದಿದ್ದು, ಎರಡು ವೈದ್ಯಕೀಯ ಕಾಲೇಜುಗಳೂ ವಿವಿಧ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುತ್ತಿವೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಆರೋಗ್ಯ ಸಂಜೀವಿನಿ ಯೋಜನೆಯ ನೋಡಲ್ ಅಧಿಕಾರಿ ಡಾ. ಶಶಿಧರ ಕಳಸನೂರಮಠ ಅವರು ಯೋಜನೆಯ ಪ್ರಮುಖ ಅಂಶಗಳ ಕುರಿತು ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪರಶುರಾಮ ಎಫ್.ಕೆ., ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಡಾ. ಸಿದ್ದನಗೌಡ ಪಾಟೀಲ ಸೇರಿದಂತೆ ಅಧಿಕಾರಿಗಳು, ವೈದ್ಯರು ಹಾಗೂ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 