ಅಂಗವಿಕಲತೆ ಎಂಬುದು ಶಾಪವಲ್ಲ: ಗಲಗಲಿ
Disability is not a curse: Galagali
ರನ್ನ ಬೆಳಗಲಿ 03: ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು ಅಂತರಾಷ್ಟ್ರೀಯ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಜರಗಿತು. ಮುಖ್ಯಶಿಕ್ಷಕ ಆರ್ ಡಿ ಗಲಗಲಿ ಅಂಗವಿಕಲತೆ ಎಂಬುದು ಶಾಪವಲ್ಲ. ಎಲ್ಲರಂತೆ ಅವರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹಿಸುವುದೇ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಅದೆಷ್ಟೋ ಅಂಗವಿಕಲರು ಅಂಗವೈಕಲ್ಯತೆಯನ್ನು ಮೀರಿ ಬೆಳೆದು, ಸರ್ವರಿಗೂ ಸ್ಪೂರ್ತಿಯಾಗಿದ್ದಾರೆ ಎಂದು ತಿಳಿಸಿದರು.
ಯಮನಪ್ಪ ಆಲಗೂರ ಎಸ್ ಡಿ ಎಂ ಸಿ ಅಧ್ಯಕ್ಷರು ಶಾಲೆಯ ವಿಶೇಷ ಆದ್ಯತೆಯುಳ್ಳ ವಿದ್ಯಾರ್ಥಿನಿ ಐಶ್ವರ್ಯ ಮೂಲಿಮನೆಗೆ ಸನ್ಮಾನಿಸಿ ಗ್ರಂಥ ಉಡುಗೊರೆಯನ್ನು ನೀಡಿದರು.ಎಸ್ ಹೆಚ್ ಮಾದರ, ಎಸ್ ಪಿ ಜೋಶಿ, ಆರ್ ಡಿ ಬಂಡಿ, ಎಚ್ ಬಿ ಜಮಾದಾರ, ರೂಪಾ ದಂಡಿನ, ರಾಘವೇಂದ್ರ ನೀಲನ್ನವರ, ಶೋಭಾ ವೀರಘಂಟಿ, ಭಾರತಿ ಮಳ್ಳಿಗೇರಿ, ಕಾಳಮ್ಮ ಬಡಿಗೇರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 