ಗದಗ 22: ಅಂಗವಿಕಲರ ಕುರಿತು ಬರೀ ಅನುಕಂಪ ತೋರದೇ ಅವರು ಸ್ವಾಭಿಮಾನದಿಂದ ಜೀವನ ಮಾಡಲು ಅವಕಾಶ ಮಾಡಿಕೊಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ರಾಜ್ಯ ಅಂಗವಿಕಲ ಅಧಿನಿಯಮದ ಆಯುಕ್ತ ವಿ.ಎಸ್.ಬಸವರಾಜು ನುಡಿದರು
ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ಮಾತನಾಡಿದರು.
ಅಂಗವಿಕಲರಿಗೆ ಸೌಲಭ್ಯ ಒದಗಿಸುವುದು ಪ್ರತಿಯೊಂದು ಇಲಾಖೆಯ ಕಾನೂನಾತ್ಮಕ ಜವಾಬ್ದಾರಿಯಾಗಿದೆ ಅಂಗವಿಕಲರಿಗೆ ಸೌಲಭ್ಯ ಒದಗಿಸುವಲ್ಲಿ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕಾರ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಅಪೌಷ್ಟಿಕತೆಯಿಂದ ಬಳಲುತ್ತಿರುವ ಅಂಗವಿಕಲ ಮಕ್ಕಳನ್ನು ಗುರುತಿಸಿ ಅಂತಹ ಮಕ್ಕಳು ಸದೃಢರಾಗಲು ಅವರ ಪಾಲಕರುಗಳಿಗೆ ತರಬೇತಿ ನೀಡಬೇಕು. ವಿಕಲಚೇತನರ ಉದ್ಯಮಶೀಲತೆ ಹಾಗೂ ನಾಯಕತ್ವ ಗುಣಗಳನ್ನು ಕಂಡು ಹಿಡಿದು ತೋಟಗಾರಿಕೆ, ಆಹಾರ ಪದಾರ್ಥಗಳ ತಯಾರಿಕೆ, ಬೇಕರಿ, ವಿವಿಧ ಕ್ಷೇತ್ರಗಳಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ವಿವಿಧ ಇಲಾಖೆಯವರು ವಿಕಲಚೇತನರೊಂದಿಗೆ ಕೈ ಜೋಡಿಸಬೇಕು. ಕೆಡಿಪಿ ಸಭೆಯಲ್ಲಿಯೂ ಸಹ ಅಂಗವಿಕಲರ ಅನುದಾನದ ಸಮರ್ಪಕ ಬಳಕೆಯ ಕುರಿತು ಚಚರ್ೆ ಆಗಬೇಕು ಎಂದು ವಿ.ಎಸ್. ಬಸವರಾಜು ಸೂಚಿಸಿದರು.
ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಅವರು ಮಾತನಾಡಿ ಜಿಲ್ಲೆಯಲ್ಲಿ ಜಿ.ಪಂ. ವ್ಯಾಪ್ತಿಯಲ್ಲಿನ ವಿವಿಧ ಇಲಾಖೆಯ ಅಧಿಕಾರಿಗಳು ಅಂಗವಿಕಲರಿಗಾಗಿ ಮೀಸಲಿರುವ ಶೇ.5 ರ ಅನುದಾನ ಸರಿಯಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಪ್ರತಿ ವರ್ಷವೂ ಅಂಗವಿಕಲರನ್ನು ಗುರುತಿಸಲು ತಮ್ಮ ವ್ಯಾಪ್ತಿ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ವರದಿ ನೀಡಬೇಕು. ನರೇಗಾ ಯೋಜನೆಯಡಿ ಅಂಗವಿಕಲರಿಗೆ ಜಾಬ್ ಕಾರ್ಡ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಂಗವಿಕಲರಿಗೆ ಆಸನದ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ಬುದ್ಧಿಮಾಂದ್ಯ ಮಕ್ಕಳಿಗೆ ವಿಶೇಷ ಶಿಕ್ಷಣದ ತರಬೇತಿ ಸೇರಿದಂತೆ ಸಾಮಾಜಿಕ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಜಿಲ್ಲಾ ತರಬೇತಿ ಸಂಸ್ಥೆ , ಉದ್ಯೋಗ ವಿನಿಮಯ ಇಲಾಖೆ, ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅಂಗವಿಕಲರ ಸೌಲಭ್ಯಗಳ ನೀಡುವಿಕೆಯ ಕುರಿತು ಪರಿಶೀಲನೆ ನಡೆಯಿತು.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಅಂಗವಿಕಲ ಅಧಿನಿಯಮದ ಉಪಾಯುಕ್ತ ಎಸ್.ಕೆ. ಪದ್ಮನಾಭ, ಅಂಗವಿಕಲ ಶಿಕ್ಷಣ ಸಂಸ್ಥೆಯ ಹಂಪಣ್ಣ, ಸೋಮನಾಥ ಮಹಾಜನ ಶೆಟರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಿ. ಸಿ. ಕರಿಗೌಡ್ರ, ತಹಶೀಲ್ದಾರ ಶ್ರೀನಿವಾಸ ಮೂತರ್ಿ ಕುಲಕಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೇಶಕಿ ಅಕ್ಕಮಹಾದೇವಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಆಶು ನದಾಫ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಅಂಗವಿಕಲರ ಕಲ್ಯಾಣ ಇಲಾಖೆಯ ಎಮ್. ಆರ್. ಡಬ್ಲ್ಯು, ವಿ.ಆರ್. ಡಬ್ಲು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.