ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ವಿಕಲಚೇತನರ ಪ್ರತಿಭಟನೆ
Disabled people protest demanding various demands
ಬೆಳಗಾವಿ 16: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ವಿಕಲಚೇತನರ ಒಕ್ಕೂಟ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ವಿಕಲಚೇತನರ ಮಾಸಿಕ ಪೋಷಣಾ ಭತ್ಯೆಯನ್ನು ಕನಿಷ್ಠ 6,000 ರೂಪಾಯಿಗಳಿಗೆ ಹೆಚ್ಚಿಸಬೇಕು ಹಾಗೂ ರಾಜ್ಯದ ಎಲ್ಲಾ ದಿವ್ಯಾಂಗರಿಗೆ ಬಿಪಿಎಲ್ ಪಡಿತರ ಚೀಟಿ ವಿತರಿಸಬೇಕು. ಇದರೊಂದಿಗೆ ವರ್ಷಕ್ಕೆ 2 ಲಕ್ಷ ರೂಪಾಯಿಗಳ ಆರೋಗ್ಯ ವಿಮೆ ಮತ್ತು ಶಕ್ತಿ ಯೋಜನೆಯಡಿ ಉಚಿತ ಬಸ್ ಪಾಸ್ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು.
ಸ್ಥಳೀಯ ಸಂಸ್ಥೆಗಳಿಂದ ಹಿಡಿದು ವಿಧಾನಸಭೆ ಮತ್ತು ಲೋಕಸಭೆಯವರೆಗೆ ವಿಕಲಚೇತನರಿಗೆ ರಾಜಕೀಯವಾಗಿ ಒಂದು ಸ್ಥಾನವನ್ನು ಮೀಸಲಿಡಬೇಕು ಎಂದು ಆಗ್ರಹಿಸಿದ ಒಕ್ಕೂಟವು ಪ್ರಸ್ತುತ ವಿಕಲಚೇತನರಿಗಾಗಿ ಮೀಸಲಿಟ್ಟಿರುವ ಶೇಕಡಾ 5ರಷ್ಟು ಅನುದಾನ ದುರ್ಬಳಕೆಯಾಗುತ್ತಿದ್ದು, ಇದನ್ನು ತಡೆದು ಪ್ರತಿ ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ‘ದಿವ್ಯಾಂಗ ಭವನ’ಗಳನ್ನು ನಿರ್ಮಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಂತರ ಸಂಘಟನೆಯ ಮುಖಂಡರು ಮಾತನಾಡಿ ಆರ್ಥಿಕವಾಗಿ ಹಿಂದುಳಿದಿರುವ ವಿಕಲಚೇತನರ ಬದುಕಿಗೆ ಸರ್ಕಾರ ಆಸರೆಯಾಗುತ್ತಿಲ್ಲ.. ಸರ್ಕಾರದ ಇದೇ ರೀತಿ ನಿರ್ಲಕ್ಷ್ಯ ಧೋರಣೆ ಮುಂದುವರೆದರೆ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಮತದಾನದ ಹಕ್ಕನ್ನು ಬಹಿಷ್ಕರಿಸುವ ಮೂಲಕ ಕಠಿಣ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ರಾವಸಾಹೇಬ್ ದೇವರಮನಿ, ಚಿದಾನಂದ ದುರದುಂಡಿ, ಶಾಂತಾಬಾಯಿ ಮಳವಾಡೆ, ಸುವರ್ಣ ಮಳವಾಡೆ, ಬಸವರಾಜ್ ಬಾಳನಾಯಕ, ಗಣೇಸ್ ಸಡೇಕರ, ಲಕ್ಷ್ಮಣ್ ರಾವಣಕಟ್ಟಿ, ರಾಜೇಶ್ವರಿ ರಾಜಣ್ಣವರ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 