ಅನಧಿಕೃತ ವೈದ್ಯಕೀಯ ವೃತಿ ನಡೆಸುತ್ತರುವವರ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ
Disciplinary action against those practicing unauthorized medical profession: District Collector
ಲೋಕದರ್ಶನ ವರದಿ
ಗದಗ 23: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಹೆಜ್ಜೆ ಇಟ್ಟಿದ್ದು, ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೋಳ್ಳಲು 'ಜಿಲ್ಲಾ ಮಟ್ಟದ ವಿಶೇಷ ಪಡೆ'0ುನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜೂನ್ 11 ಗುರುವಾರ ರಂದು 'ಜಿಲ್ಲಾ ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರ ಸಮಿತಿ' ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಪಾಸಣೆ ವೇಳೆ ಪತ್ತೆಯಾದ ಮೂವರು ನಕಲಿ ವೈದ್ಯರಿಗೆ ತಲಾ 50 ಸಾವಿರ ರೂಪಾಯಿಗಳ ದಂಡ ವಿಧಿಸಿ ಕಾನೂನು ಕ್ರಮ ಜರುಗಿಸಲಾಗಿದ್ದು, ಅವರಿಂದ ಸಂಗ್ರಹವಾಗುವ ದಂಡದ ಮೊತ್ತವನ್ನು ಸರ್ಕಾರಕ್ಕೆ ಭರಣ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆ0ುಲ್ಲಿ ಕೆ.ಪಿ.ಎಂ.ಇ ಅಡಿ ನೋಂದಣಿ ಮಾಡಿಕೊಳ್ಳದೆ ನಡೆಯುತ್ತಿರುವ ಯಾವುದೇ ಖಾಸಗಿ ಆಸ್ಪತ್ರೆ, ಲ್ಯಾಬ್, ಸ್ಕಾ-್ಯನಿಂಗ್ ಸೆಂಟರ್, ಬ್ಲಡ್ ಬ್ಯಾಂಕ್ ಹಾಗೂ ಇತರೆ ಆರೋಗ್ಯ ಸಂಸ್ಥೆಗಳು ಈ ಪ್ರಕಟಣೆ ಹೊರಡಿಸಿದ 15 ದಿನಗಳೊಳಗೆ ಕಡ್ಡಾಯವಾಗಿ ಆನ್‌ಲೈನ್ ಮೂಲಕ ನೋಂದಣಿಗೆ ಅರ್ಜಿ ಸಲ್ಲಿಸಬೇಕು. ತಪ್ಪಿದ್ದಲ್ಲಿ ಕಾಯ್ದೆ ಪ್ರಕಾರ ಕಠಿಣ ಕ್ರಮ ಮತ್ತು ದಂಡ ವಿಧಿಸಲಾಗುವುದು ಎಂದು ಹೇಳಿದರು.
ನೋಂದಾಯಿತ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳು ತಮ್ಮ ಸಂಸ್ಥೆಯ ನೋಂದಣಿ ಅವಧಿ ಮುಗಿಯುವ ಮೂರು ತಿಂಗಳು ಮೊದಲೇ, ಅಗತ್ಯ ದಾಖಲೆಗಳೊಂದಿಗೆ ನವೀಕರಣಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.
ಯಾವುದೇ ಸರ್ಕಾರಿ ಆಸ್ಪತ್ರೆಗಳ ಆವರಣದಿಂದ 200 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳು ಕಾರ್ಯನಿರ್ವಹಿಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಇದೆ ಸಂದರ್ಭದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾಽಎಸ್.ಎಸ್.ನೀಲಗುಂದ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಗೂ ಕೆ.ಪಿ.ಎಮ್.ಇ, ನೋಡಲ್ ಅಧಿಕಾರಿ,ಡಾಽ ಹೆಚ್.ಎಲ್.ಗಿರಡ್ಡಿ, ಐ.ಎಂ.ಎ ಅಧ್ಯಕ್ಷ ಡಾಽ ಶ್ರೀಧರ ಕುರಡಗಿ, ಜಿಲ್ಲಾ ಆಯೂಷ್ ಅಧಿಕಾರಿ ಡಾಽ ಜುಬೇದ ತಿಗಳೆರ,ಗದಗ ತಾಲೂಕಾ ಆರೋಗ್ಯಾಧಿಕಾರಿಳಾದ ಡಾಽಽ ಪ್ರೀತ್ ಖೋನಾ, ಡಾಽಽ ಬಿ. ಎಸ್ ಭಜಂತ್ರಿ, ಡಾಽಽ ಸುಭಾಸಚಂದ್ರ ದಾಯಗೊಂಡ, ಡಾಽ ಸಂತೋಷಗೌಡ ಪಾಟೀಲ,ಡಾಽ ಆರ್. ಸಿ ಕೊರವನವರ ಸೇರಿದಂತೆ ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 