ಗದಗ 24: ಕ್ರೀಡಾಪಟುಗಳಿಗೆ ಶಿಸ್ತು ಮುಖ್ಯವಾಗಿದ್ದು ಕ್ರೀಡಾಸ್ಪೂರ್ತಿಯಿಂದ ಕ್ರೀಡೆಗಳಲ್ಲಿ ಭಾಗವಹಿಸಿ ರಾಜ್ಯ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ ನುಡಿದರು.
ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜರುಗಿದ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗದುಗಿನಲ್ಲಿ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟ ಜಿಲ್ಲೆಯಲ್ಲಿ ಆಯೋಜನೆಗೊಳ್ಳುತ್ತಿರುವದು ಹೆಮ್ಮೆಯ ಸಂಗತಿಯಾಗಿದೆ. ಸರಕಾರಗಳು ಕ್ರೀಡೆಗಳಿಗಾಗಿ ನೀಡಿರುವ ಯೋಜನೆ ಹಾಗೂ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳ ಕ್ರೀಡಾಂಗಣಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ನುರಿತ ತರಬೇತುದಾರರನ್ನು ನೇಮಿಸುವ ಅಗತ್ಯವಿದೆ ಎಂದು ಎಸ್.ವಿ.ಸಂಕನೂರ ಅಭಿಪ್ರಾಯ ಪಟ್ಟರು.
ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ ಅವರು ಮಾತನಾಡಿ ದೇಶದಲ್ಲಿ ಕ್ರೀಡಾ ಪ್ರತಿಭೆಗಳಿದ್ದರೂ ಅವರಿಗೆ ಅಗತ್ಯದ ಸೌಲಭ್ಯ ಹಾಗೂ ತರಬೇತಿ ದೊರೆಯುತ್ತಿಲ್ಲ. ವಿಧ್ಯಾಥರ್ಿಗಳಿಗೆ ಬಾಲ್ಯದಿಂದಲೇ ಅವರ ಆಸಕ್ತಿಯ ಕ್ರೀಡಾ ತರಬೇತಿ ನೀಡಿ ಸಾಧನೆ ಮಾಡುವಂತೆ ಧೃಢ ಸಂಕಲ್ಪ ಹೊಂದಲು ಮುಂದಾಗ ಬೇಕಿದೆ ಎಂದುರು.
ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಯುವಜನ ಒಕ್ಕೂಟದ ಜಿಲ್ಲಾ ಅಧ್ಯಕ್ಷ ರವಿಕಾಂತ ಅಂಗಡಿ ವೇದಿಕೆ ಮೇಲಿದ್ದರು ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿಗಳು, ತರಬೇತಿದಾರರು, ನಿಣರ್ಾಯಕರು ಹಾಗೂ ಬೆಳಗಾವಿ ವಿಭಾಗದ ವಿವಿಧ ಜಿಲ್ಲೆಗಳ ಕ್ರೀಡಾಪಟುಗಳು ಸಮಾರಂಭದಲ್ಲಿ ಭಾಗವಹಿಸಿದ್ದರು. ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿದರ್ೇಶಕ ಬಿ.ಬಿ. ವಿಶ್ವನಾಥ ಸ್ವಾಗತಿಸಿದರು, ಶಾರದಾ ಬಂಡಿ ಪ್ರಾಥರ್ಿಸಿದರು. ಎಂ.ಎಸ್. ಕೋತಬಾಳ ಕಾರ್ಯಕ್ರಮ ನಿರೂಪಿಸಿದರು. ಎಂ.ಡಿ. ತಳಳ್ಳಿ ವಂದಿಸಿದರು.