ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ ವ್ಯಕ್ತಿತ್ವ ವಿಕಾಸನಕ್ಕೆ ಸಹಕಾರಿ
Discipline and punctuality among students are helpful in personality development
ಲೋಕದರ್ಶನ ವರದಿ
ಹೂವಿನಹಡಗಲಿ 28 : ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಸೇವಾ ಮನೋಭಾವ, ನಾಯಕತ್ವ ಗುಣ ಬೆಳೆಸುವ ಜತೆಗೆ ವ್ಯಕ್ತಿತ್ವ ವಿಕಾಸನಕ್ಕೆ ಸಹಕಾರಿಯಾಗಿದೆ ಎಂದು ಜಿಬಿಆರ್ ಕಾಲೇಜಿನ ಆಡಳಿತ ಮಂಡಳಿ ಅದ್ಯಕ್ಷ ಸಿ. ಮೋಹನ್ ರೆಡ್ಡಿ ಹೇಳಿದರು. ಪಟ್ಟಣದ ಜಿಬಿಆರ್ ಕಾಲೇಜಿನಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಎನ್ನೆಸ್ಸೆಸ್ಸಿ ಗಾಂಧೀಜಿ ಪರಿಕಲ್ಪನೆಯಾಗಿತ್ತು.
ಗ್ರಾಮಗಳ ಸ್ವಚ್ಛತೆ ಮತ್ತು ಜಾಗೃತಿ ಮೂಡಿಸುವ ಕೆಲಸ ಎನ್ನೆಸ್ಸೆಸ್ಸಿನಿಂದ ಸಾಧ್ಯ ಎಂದರು. ಪ್ರಾಚಾರ್ಯ ಎಸ್.ಎಸ್.ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜತೆಗೆ ಕುಟುಂಬ, ಸಮಾಜ ಹಾಗೂ ದೇಶಕ್ಕೆ ನೀಡುವ ಸೇವೆಯು ಅಪಾರವಾಗಿದೆ ಎಂದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈಚಂದ್ರಬಾಬು ಹಾಗೂ ಇತರರು ಮಾತನಾಡಿದರು. ಆಡಳಿತ ಮಂಡಳಿ ಸದಸ್ಯರಾದ ಕೆ.ಎಂ.ಉದಾಸಿ, ಮಲ್ಲಿಕಾರ್ಜುನ ಎಂ, ಎನ್‌ಎಸ್‌ಎಸ್ ಅಧಿಕಾರಿಗಳಾದ ಮಾಬು ಸಾಬ್ ಕೆ, ಡಾ.ಶರಣಪ್ಪ, ಪ್ರಿಯಾಂಕ, ದೈಹಿಕ ನಿರ್ದೇಶಕ ಬಡೇಸಾಬನಾಯಕ, ಉಪನ್ಯಾಸಕರಾದ ಸಂಜಯ್, ಅನ್ನದಾನದಪ್ಪ, ಕುಸುಮ, ಶ್ವೇತಾ, ವೀಣಾ, ಆಸ್ಮಾ, ಶೇಕ್ಷಾವಲಿ ಹಾಗೂ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಇತರರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 