ಶಿಸ್ತು ಮತ್ತು ಕೌಶಲ್ಯವೇ ಯಶಸ್ಸಿನ ಮೂಲಮಂತ್ರ ಎಜಿಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಟಡಿ ಕಿಟ್ ವಿತರಣೆ
Discipline and skill are the keys to success: Study kits distributed to AGM Engineering College stud
ಚಿಕ್ಕೋಡಿ 19 : ಜೀವನದಲ್ಲಿ ಯಶಸ್ಸು ಸಾಧಿಸಲು ಸಮಯಪಾಲನೆ, ಶಿಸ್ತು ಹಾಗೂ ಸ್ಪಷ್ಟ ಗುರಿ ಅತ್ಯಗತ್ಯ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾಜಿ ಇಂಜಿನಿಯರಿಂಗ್ ಡೀನ್ ಡಾ. ಡಿ.ಎಚ್. ರಾವ್ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ತಾಲೂಕಿನ ಶಮನೇವಾಡಿಯ ಎಜಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ "ಲಾಂಚ್ಪ್ಯಾಡ್-2026" ಕಾರ್ಯಕ್ರಮದ ಅಂಗವಾಗಿ ಈಗಾಗಲೇ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ಟಡಿ ಕಿಟ್ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಯಾವ ಕಾಲೇಜಿನಲ್ಲಿ ಓದುತ್ತಾರೆ ಎನ್ನುವುದಕ್ಕಿಂತ ತಮ್ಮನ್ನು ತಾವು ಹೇಗೆ ರೂಪಿಸಿಕೊಳ್ಳುತ್ತಾರೆ ಎಂಬುದೇ ಮುಖ್ಯ.
ಮನೋಭಾವನೆ, ಕೌಶಲ್ಯ ಮತ್ತು ಜ್ಞಾನ ಎಂಬ ಮೂರು ಅಂಶಗಳ ಮೇಲೆ ಗಮನಹರಿಸಿ ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು. ಪ್ರತಿದಿನದ ಚಟುವಟಿಕೆಗಳನ್ನು ಆತ್ಮಾವಲೋಕನ ಮಾಡಿಕೊಂಡು ಮುಂದಿನ ದಿನದ ಯೋಜನೆ ರೂಪಿಸಬೇಕು. ದೊಡ್ಡ ಕನಸುಗಳನ್ನು ಕಾಣುವ ಜೊತೆಗೆ ಅವುಗಳನ್ನು ಸಾಧಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರಸಂತ ಆಚಾರ್ಯಶ್ರೀ 108 ಗುಣಧರನಂದಿ ಮಹಾರಾಜರು ಮಾತನಾಡಿ, ಗಡಿಭಾಗದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ತಾಂತ್ರಿಕ ಶಿಕ್ಷಣ ದೊರಕಿಸುವ ಉದ್ದೇಶದಿಂದ 2026-27ನೇ ಶೈಕ್ಷಣಿಕ ವರ್ಷದಿಂದ ಎಜಿಎಂ ಇಂಜಿನಿಯರಿಂಗ್ ಕಾಲೇಜು ಆರಂಭಿಸಲಾಗಿದೆ.
ಮಹಾವಿದ್ಯಾಲಯದಲ್ಲಿ 10 ವರ್ಷಕ್ಕಿಂತ ಹೆಚ್ಚು ಅನುಭವ ಹೊಂದಿರುವ ಪ್ರಾಧ್ಯಾಪಕರ ಜೊತೆಗೆ ಐಐಟಿ ಹಾಗೂ ಐಐಐಟಿ ತಜ್ಞರಿಂದ ಮಾರ್ಗದರ್ಶನ, ಉದ್ಯಮ ಕ್ಷೇತ್ರದ ಪರಿಣಿತರಿಂದ ತರಬೇತಿ ಹಾಗೂ ಮೊದಲನೇ ವರ್ಷದಿಂದಲೇ ಪ್ಲೇಸ್ಮೆಂಟ್ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.ವಿಶ್ವವಿದ್ಯಾಲಯದಲ್ಲಿ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಉಚಿತ ವಿಮಾನಯಾನ, ಕಾಲೇಜಿನಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಲ್ಯಾಪ್ಟಾಪ್ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಟ್ಯಾಬ್ಲೆಟ್ ನೀಡುವ ವಿಶೇಷ ಪ್ರೋತ್ಸಾಹ ಯೋಜನೆಗಳನ್ನೂ ಘೋಷಿಸಿದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 