ಲಾಕ್‌ಡೌನ್‌ ಬಗ್ಗೆ ಎಲ್ಲ ಆಯಾಮಗಳಲ್ಲಿ ಚರ್ಚಿಸಿ ತೀರ್ಮಾನ- ಬಸವರಾಜ ಬೊಮ್ಮಾಯಿ

ಬೆಂಗಳೂರು, ಏ.13, ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರ್ ಅವರು ಉತ್ತಮ‌ ರಾಜಕಾರಣಿಯಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರ ಆತ್ಮಕ್ಕೆ ಚಿರ ಶಾಂತಿ ಕೋರುತ್ತೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕೇಂದ್ರದ ಗೃಹ ಇಲಾಖೆ ರಾಜ್ಯಗಳಿಗೆ ಲಾಕ್ ಡೌನ್ ಬಗ್ಗೆ ಕೆಲವು ನಿರ್ದೇಶನ ನೀಡಿದೆ. ಈ‌ ಸಂಬಂಧ ಇಂದು ಸಭೆ ನಡೆಸಲಾಗುತ್ತಿದೆ. ಇಂದಿನ ಸಭೆಯಲ್ಲಿ ಎಲ್ಲಾ ಆಯಾಮಗಳಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.