ಸಂಪ್ರದಾಯ ಬದಲಾವಣೆ ಚರ್ಚೆ: ಬೆಳಗಾವಿಗೆ ಮತ್ತೊಬ್ಬ ಸಚಿವರ ಸ್ಥಾನ
Discussion on changing convention: Another ministerial berth for Belagavi
ಸಂಬರಗಿ 13 : ರಾಜ್ಯ ಸಚಿವ ಸಂಪುಟ ಪುನರ್ರಚನೆ ಶೀಘ್ರದಲ್ಲೇ ನಡೆಯುವ ಸಾಧ್ಯತೆ ಇದ್ದು, ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಚಟುವಟಿಕೆಗಳು ಜೋರಾಗಿವೆ. ಶಾಸಕ ರಾಜು ಕಾಗೆ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಪಕ್ಷದ ವರಿಷ್ಠರ ಗಮನ ಸೆಳೆದಿದ್ದಾರೆ.
ಸ್ವತಃ ಸಚಿವ ಸ್ಥಾನಕ್ಕೆ ಆಸಕ್ತಿ ಹೊಂದಿದ್ದರೂ, ಆರೋಗ್ಯ ಕಾರಣಗಳಿಂದ ರಾಜು ಕಾಗೆ ಅವರು ತಮ್ಮ ಬದಲಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಲಕ್ಷ್ಮಣ ಸವದಿ ಅವರ ಹೆಸರನ್ನು ಸೂಚಿಸಿರುವುದಾಗಿ ತಿಳಿದುಬಂದಿದೆ. ಇದರಿಂದ ಬೆಳಗಾವಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಮತ್ತೊಂದು ಸ್ಥಾನ ಸಿಗುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.
ಬೆಳಗಾವಿ ರಾಜ್ಯದ ಅತಿದೊಡ್ಡ ಜಿಲ್ಲೆಯಾಗಿದ್ದು, ಇಲ್ಲಿ ಇಬ್ಬರು ವಿಧಾನ ಪರಿಷತ್ ಸದಸ್ಯರು, ಇಬ್ಬರು ಸಂಸದರು ಹಾಗೂ 18 ಶಾಸಕರಿದ್ದಾರೆ. ಸಾಮಾನ್ಯವಾಗಿ ಜಿಲ್ಲೆಗೆ ಇಬ್ಬರು ಸಚಿವರ ಪ್ರಾತಿನಿಧ್ಯ ದೊರೆಯುತ್ತಿತ್ತು. ಆದರೆ ಪ್ರಸ್ತುತ ಲಕ್ಷ್ಮೀ ಹೆಬ್ಬಾಳ್ಕರ್ ಮಾತ್ರ ಸಚಿವರಾಗಿದ್ದು, ಪುನರ್ರಚನೆಯಲ್ಲಿ ಮತ್ತೊಬ್ಬರಿಗೆ ಅವಕಾಶ ಸಿಗುವ ನೀರೀಕ್ಷೆ ಇದೆ.
ಸಚಿವ ಸಂಪುಟ ಪುನರ್ರಚನೆ ಹಿನ್ನೆಲೆಯಲ್ಲಿ ಹಲವು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನರ್ರಚನೆ ಕುರಿತೂ ಚರ್ಚೆಗಳು ನಡೆದಿವೆ ಎನ್ನಲಾಗಿದೆ.
ಐನಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ರಾಜು ಕಾಗೆ ಅವರು ಸಾರ್ವಜನಿಕವಾಗಿ ಲಕ್ಷ್ಮಣ ಸವದಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪರ ಬ್ಯಾಟಿಂಗ್ ನಡೆಸಿದ್ದು, ಈ ಇಬ್ಬರಿಗೂ ಸಚಿವ ಸ್ಥಾನ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರಿಂದ ಅವರಿಬ್ಬರ ಹೆಸರುಗಳು ಮತ್ತೊಮ್ಮೆ ಪ್ರಮುಖವಾಗಿ ಕೇಳಿಬರುತ್ತಿವೆ.
ಇದೇ ವೇಳೆ ರಾಮದುರ್ಗ ಶಾಸಕ ಅಶೋಕ್ ಪಟ್ಟಣ ಸೇರಿದಂತೆ ಇನ್ನೂ ಕೆಲ ಶಾಸಕರು ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಹೀಗಾಗಿ ಬೆಳಗಾವಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಎಷ್ಟು ಸ್ಥಾನಗಳು ದೊರೆಯಲಿವೆ ಮತ್ತು ಅಂತಿಮವಾಗಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಪುನರ್ರಚನೆ ಘೋಷಣೆಯ ಬಳಿಕವೇ ಸ್ಪಷ್ಟವಾಗಲಿದೆ.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 