ಕಬ್ಬಿಗೆ ಲಾಭದಾಯಕ ದರ ನಿಗದಿಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ : ಸಚಿವ ರುದ್ರ್ಪ ಲಮಾಣಿ
Discussions at the government level on fixing a profitable price for sugarcane: Minister Rudrappa La
ಹಾವೇರಿ, ಸೆ.9: ಕಬ್ಬು ಬೆಳೆಗಾರರಿಗೆ ಲಾಭದಾಯಕ ದರ ನಿಗದಿಪಡಿಸುವುದು, ಸಕ್ಕರೆ ಕಾರ್ಖಾನೆಗಳ ರಿಕವರಿ ಪ್ರಮಾಣದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಹಾಗೂ ರೈತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಕ್ಕರೆ ಮತ್ತು ಜವಳಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರ್ಪ ಲಮಾಣಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಸಮಸ್ಯೆಗಳನ್ನು ಪರಿಹರಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ರೈತರ ಬೇಡಿಕೆಗಳ ಕುರಿತು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರತಿ ಟನ್ ಕಬ್ಬಿಗೆ ?5,500 ದರ ನಿಗದಿಪಡಿಸುವಂತೆ ರೈತರು ಬೇಡಿಕೆ ಸಲ್ಲಿಸಿದ್ದು, ಸಕ್ಕರೆ ಕಾರ್ಖಾನೆಗಳು ನೀಡುತ್ತಿರುವ ದರ ಹಾಗೂ ರಿಕವರಿ ಪ್ರಮಾಣದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಸಾಲಿನಲ್ಲಿ ಕೆಲವು ಕಾರ್ಖಾನೆಗಳಲ್ಲಿ ರಿಕವರಿ ಪ್ರಮಾಣ ಕಡಿಮೆಯಾಗಿದ್ದರಿಂದ ನೀರೀಕ್ಷಿತ ದರ ದೊರೆಯಲಿಲ್ಲ. ಪ್ರಸಕ್ತ ಸಾಲಿನಲ್ಲಿ ರಿಕವರಿ ಪ್ರಮಾಣ ಹೆಚ್ಚಿದ್ದರೂ ಅದಕ್ಕೆ ಅನುಗುಣವಾಗಿ ಕಬ್ಬಿನ ದರ ನಿಗದಿಯಾಗಿಲ್ಲ ಎಂದು ರೈತರು ಸಭೆಯಲ್ಲಿ ತಿಳಿಸಿದರು.
ಕಾರ್ಖಾನೆಗಳಲ್ಲಿ ಕಬ್ಬು ನುರಿಸುವ ಪ್ರಮಾಣ ಮತ್ತು ಅದರಿಂದ ಉತ್ಪಾದನೆಯಾಗುವ ಸಕ್ಕರೆಯ ಪ್ರಮಾಣದ ಆಧಾರದ ಮೇಲೆ ರಿಕವರಿ ನಿಗದಿಯಾಗುತ್ತದೆ. ಈ ಪ್ರಕ್ರಿಯೆಯಲ್ಲಿ ರೈತರಿಗೆ ಮಾಹಿತಿ ಹಾಗೂ ಪರೀಶೀಲನೆಗೆ ಅವಕಾಶ ಕಲ್ಪಿಸಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಸರ್ಕಾರದ ವತಿಯಿಂದ ರಿಕವರಿ ಪರೀಕ್ಷೆ ನಡೆಸಲು ಪ್ರಯೋಗಾಲಯ ಸ್ಥಾಪಿಸಬೇಕು ಎಂದು ರೈತರು ಒತ್ತಾಯಿಸಿದರು.
ಉತ್ತರ ಮತ್ತು ದಕ್ಷಿಣ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ರಿಕವರಿ ಆಧಾರಿತ ದರ ನಿಗದಿಯಲ್ಲಿ ವ್ಯತ್ಯಾಸವಿದ್ದು, ರಾಜ್ಯಾದ್ಯಂತ ಏಕರೂಪದ ಮಾನದಂಡಗಳನ್ನು ಅಳವಡಿಸಿಕೊಂಡು ಕಬ್ಬಿಗೆ ದರ ನಿಗದಿಪಡಿಸಬೇಕು. ಸಕ್ಕರೆ ಬೆಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಶೀಘ್ರ ಕಾರ್ಯಾರಂಭ ಮಾಡಿದರೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ರೈತರು ಮನವಿ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 