ಬಾಗಲಕೋಟೆ12: ಜಿಲ್ಲೆಯ ತ್ರಿವಳಿ ನದಿಗಳಾದ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಪ್ರವಾಹದಿಂದ ಜನತೆ ಸಂಕಷ್ಟಕ್ಕೆ ಒಳಗಾಗಿದ್ದು, ಇಲ್ಲಿವರೆಗೆ ಒಟ್ಟು 1,10,547 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ತಿಳಿಸಿದ್ದಾರೆ.
ಇಲ್ಲಿಯವರೆಗೆ ಒಟ್ಟು 178 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಇದುವರೆಗೆ 24200 ಕುಟುಂಬಗಳ ಪೈಕಿ 1.10 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಪರಿಹಾರ ಕೇಂದ್ರಗಳಲ್ಲಿ ಅವರಿಗೆ ಊಟ ಮತ್ತು ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಲಾಗಿದೆ. 59627 ಜಾನುವಾರುಗಳನ್ನು ಸಹ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬಾಗಲಕೋಟೆ ತಾಲೂಕಿನಲ್ಲಿ 9, ಬೀಳಗಿಯಲ್ಲಿ 9, ಜಮಖಂಡಿಯಲ್ಲಿ 33, ಮುಧೋಳ 57, ಬಾದಾಮಿ 38, ಹುನಗುಂದದಲ್ಲಿ 38 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರವಾಹ ಪೀಡಿತ ಜನರಿಗೆ ಆರೋಗ್ಯ ಹಿತ ದೃಷ್ಠಿಯಿಂದ 178 ತಾತ್ಕಾಲಿನ ಆರೋಗ್ಯ ಕೇಂದ್ರಗಳನ್ನು ತೆರೆದು ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 345 ಟನ್ ಮೇವು ಸಂಗ್ರಹಿಸಿದ್ದು, ಪರಿಹಾರ ಕೇಂದ್ರಗಳಲ್ಲಿ 18,415 ಜಾನುವಾರುಗಳಿಗೆ ವ್ಯವಸ್ಥೆ ಮಾಡಲಾಗಿದೆ. ಲಭ್ಯವಿರುವ ಹಸಿ ಹಾಗೂ ಒಣ ಮೇವುಗಳನ್ನು ಅಗತ್ಯವಿರು ಕಡೆಗಳಲ್ಲಿ ಹಂಚಿಕೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ 42 ಜಾನುವಾರುಗಳು ಮೃತಪಟ್ಟಿವೆ. ಹಾಗೂ 3 ಜನ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹ ಕಾರ್ಯಕ್ಕೆ 2 ಎನ್.ಡಿ.ಆರ್.ಎಫ್, 2 ಎಸ್.ಡಿ.ಆರ್.ಎಫ್, 3 ಆಮರ್ಿ ತಂಡ ಹಾಗೂ 1 ಸಾವಿರ ಕ್ಕೂ ಹೆಚ್ಚು ಪೊಲೀಸ್ ಹಾಗೂ ಹೋಮ್ ಗಾಡ್ರ್ಸ ಸಿಬ್ಬಂದಿಗಳು ಮತ್ತು 100 ಸದಸ್ಯರ ಅಗ್ನಿಶಾಮಕ ತಂಡಗಳ ಜೊತೆಗೆ ಜಿಲ್ಲಾ ಮಟ್ಟದ ಮತ್ತು ತಾಲೂಕ ಮಟ್ಟದ ಎಲ್ಲ ಅಧಿಕಾರಿಗಳು ರಕ್ಷಣಾ ಕಾರ್ಯದಲ್ಲಿ ಹಗಲಿರುಳು ತೊಡಗಿದ್ದಾರೆ.
ಪ್ರವಾಹದಿಂದ ಇಲ್ಲಿವರೆಗೆ 14 ಸಾವಿರ ಹೆಕ್ಟೇರ್ ಜಮೀನು ಮುಳುಗಡೆಯಾಗಿದೆ. ಪರಿಹಾರ ನೀಡಲು ಇಚ್ಚಿಸಸುವ ದಾನಿಗಳು ಜಿಲ್ಲಾಧಿಕಾರಿಗಳ ವಿಶೇಷ ವಾಟ್ಸ್ಅಪ್ ನಂ.8971332723 ಗೆ ಸಂಪಕರ್ಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯ ಜನತೆ ಆತಂಕಕ್ಕೆ ಒಳಗಾಗದೇ ತುತರ್ು ಸಂದರ್ಭಗಳಲ್ಲಿ ಸಹಾಯವಾಣಿ ಕೇಂದ್ರಗಳು ಅಥವಾ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮನವಿ ಮಾಡಿಕೊಂಡಿದ್ದಾರೆ.