ಅರ್ಜಿಗಳನ್ನು ಕಾಟಾಚಾರಕ್ಕೆ ಸ್ವೀಕರಿಸದೇ ಕೂಡಲೇ ವಿಲೇವಾರಿ ಮಾಡಿ: ಶಾಸಕ ಐಹೊಳೆ
Dispose of applications immediately instead of accepting them merely for the sake of formality: MLA
ಅರ್ಜಿಗಳನ್ನು ಕಾಟಾಚಾರಕ್ಕೆ ಸ್ವೀಕರಿಸದೇ ಕೂಡಲೇ ವಿಲೇವಾರಿ ಮಾಡಿ: ಶಾಸಕ ಐಹೊಳೆ
ರಾಯಬಾಗ: ಸಾರ್ವಜನಿಕರ ಕುಂದುಕೊರತೆಗಳ ಅರ್ಜಿಗಳನ್ನು ಕೇವಲ ಕಾಟಾಚಾರಕ್ಕೆ ಸ್ವೀಕರಿಸದೇ, ಅವುಗಳನ್ನು ಪರೀಶೀಲಿಸಿ ಕೂಡಲೇ ವಿಲೇವಾರಿ ಮಾಡುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದು ಶಾಸಕ ಧುರ್ಯೋಧನ ಐಹೊಳೆ ಹೇಳಿದರು.
ಪಟ್ಟಣದ ಪ್ರಜಾಸೌಧದಲ್ಲಿರುವ ತಹಶೀಲ್ದಾರ್ ಕಚೇರಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ಪ್ರಜಾಸೇವೆ ಆಂದೋಲನ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಪ್ರಜಾಸೇವೆ ಆಂದೋಲನ’ ಮಹತ್ವದ ಯೋಜನೆಯಾಗಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಂದಾಯ ಇಲಾಖೆ ಸಚಿವರಾಗಿದ್ದ ಆರ್. ಅಶೋಕ ಅವರು ಪ್ರತಿ ತಿಂಗಳ ಮೂರನೇ ಶನಿವಾರ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮಗಳಿಗೆ ತೆರಳಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ಈ ಜನಪ್ರಿಯ ಯೋಜನೆಯನ್ನು ಜಾರಿಗೆ ತಂದಿದ್ದರು ಎಂದು ಹೇಳಿದರು.
ಸಾರ್ವಜನಿಕರ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸಲು ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಂಬಂಧಿಸಿದ ಇಲಾಖೆಗಳ ಕೌಂಟರ್ಗಳಲ್ಲಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಪಡೆಯಬೇಕು ಎಂದು ತಹಶೀಲ್ದಾರ್ ಮಹಾದೇವ ಸನಮುರಿ ಪ್ರಾಸ್ತಾವಿಕವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅರುಣ ಮಾಚಕನೂರ, ಸಿಪಿಐ ಎಂ.ಎಂ. ಡಪಿನ್, ಬಿಇಒ ಬಸವರಾಜಪ್ಪ, ಎಡಿಎ ವಿನೋದ ಮಾವರಕರ, ಪಶುವೈದ್ಯಾಧಿಕಾರಿ ಎಂ.ಬಿ. ಪಾಟೀಲ, ರವೀಂದ್ರ ಪಾಟೀಲ, ಉಪತಹಶೀಲ್ದಾರ್ ಪರಮಾನಂದ ಮಂಗಸೂಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಫೋಟೋ: ಪಟ್ಟಣದ ಪ್ರಜಾಸೌಧದ ತಹಶೀಲ್ದಾರ್ ಕಚೇರಿ ಸಭಾಭವನದಲ್ಲಿ ಶಾಸಕ ಡಿ.ಎಂ. ಐಹೊಳೆ ಅವರು ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಿರುವುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 