ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್‌ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
Disqualification of DCC Bank directors with more than 10 years of service: NABARD urges RBI to imple
ಬೆಳಗಾವಿ : ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ (ಡಿಸಿಸಿ) ಬ್ಯಾಂಕಿನಲ್ಲಿ ನಿರಂತರವಾಗಿ 10 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ನಿರ್ದೇಶಕರನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿದ್ದುಪಡಿ ನಿರ್ದೇಶನಗಳು–2026ರ ಅನ್ವಯ ಅನರ್ಹಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ತಿಳಿಸಿದ್ದಾರೆ.
ನಬಾರ್ಡ್‌ನ ಉಪ ಪ್ರಧಾನ ವ್ಯವಸ್ಥಾಪಕರು 2026ರ ಮೇ 29ರಂದು ಸಹಕಾರ ಸಂಘಗಳ ನಿಬಂಧಕರಿಗೆ ಪತ್ರ ಬರೆದು, ಬೆಳಗಾವಿ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಅಣ್ಣಾಸಾಹೇಬ ಜೊಲ್ಲೆ, ರಮೇಶ್ ಕತ್ತಿ, ಲಕ್ಷ್ಮಣ ಸವದಿ, ಅರವಿಂದ ಪಾಟೀಲ, ಮಹಾಂತೇಶ ದೊಡ್ಡಗೌಡರ, ಅಪ್ಪಾಸಾಹೇಬ ಕುಲಗುಡೆ ಹಾಗೂ ನೀಲಕಂಠ ಕಪ್ಪಲಗುದ್ದಿ ಅವರನ್ನು ಆರ್‌ಬಿಐ ತಿದ್ದುಪಡಿ ನಿರ್ದೇಶನಗಳ ಪ್ರಕಾರ ಅನರ್ಹಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಲಾಗಿದೆ.
ಮಾಹಿತಿಯ ಪ್ರಕಾರ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳು ಹಾಗೂ ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ ಸತತವಾಗಿ 10 ವರ್ಷಕ್ಕಿಂತ ಹೆಚ್ಚು ಅವಧಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವವರನ್ನು ಅನರ್ಹಗೊಳಿಸುವಂತೆ 2026ರ ಏಪ್ರಿಲ್ 1ರಂದು ಆರ್‌ಬಿಐ ಗವರ್ನರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧ ದೂರು ವಿಭಾಗವು ವಿಷಯವನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ನಬಾರ್ಡ್‌ಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ನಬಾರ್ಡ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಹೇಳಲಾಗಿದೆ.
ಇದಲ್ಲದೆ, ಆರ್‌ಟಿಐ ಮೂಲಕ ಪಡೆದ ಮಾಹಿತಿಯ ಪ್ರಕಾರ, ಆರ್‌ಬಿಐ ತಿದ್ದುಪಡಿ ನಿರ್ದೇಶನಗಳು–2026 ಜಾರಿಗೆ ಯಾವುದೇ ನ್ಯಾಯಾಲಯ ಅಥವಾ ಸಕ್ಷಮ ಪ್ರಾಧಿಕಾರದಿಂದ ತಡೆಯಾಜ್ಞೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ತಿಳಿಸಲಾಗಿದೆ.
ಆರ್‌ಬಿಐ ಹಾಗೂ ನಬಾರ್ಡ್ ನಿರ್ದೇಶನಗಳನ್ನು ಪಾಲಿಸಿ ಬೆಳಗಾವಿ ಡಿಸಿಸಿ ಬ್ಯಾಂಕಿನ ಏಳು ನಿರ್ದೇಶಕರನ್ನು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ನಗರ ಸಹಕಾರಿ ಬ್ಯಾಂಕ್‌ಗಳಲ್ಲಿ 10 ವರ್ಷಕ್ಕಿಂತ ಹೆಚ್ಚು ಅವಧಿ ಸೇವೆ ಸಲ್ಲಿಸಿರುವ ನಿರ್ದೇಶಕರನ್ನು ಕೂಡಲೇ ಅನರ್ಹಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ಈ ನಿರ್ದೇಶನಗಳನ್ನು ಸರ್ಕಾರ ಜಾರಿಗೊಳಿಸದಿದ್ದಲ್ಲಿ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್‌ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 