ರಾಷ್ಟ್ರಗೀತೆಗೆ ಅಗೌರವ: ವಿಧಾನಸಭೆಯಿಂದ ಹೊರನಡೆದ ರಾಜ್ಯಪಾಲ ರವಿ
Disrespect for the national anthem: Governor Ravi walks out of the assembly
ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಮಂಗಳವಾರ ತಮ್ಮ ಉದ್ಘಾಟನಾ ಭಾಷಣ ಮಾಡುವ ಮೊದಲು ರಾಷ್ಟ್ರಗೀತೆಗೆ ಅಗೌರವ ತೋರಿರುವುದಾಗಿ ಅಸಮಧಾನವ್ಯಕ್ತಪಡಿಸಿ, ರಾಜ್ಯ ವಿಧಾನಸಭೆಯಿಂದ ಹೊರನಡೆದ ಘಟನೆ ನಡೆದಿದೆ. ಇದರೊಂದಿಗೆ ಸತತ ಮೂರನೇ ವರ್ಷವೂ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಓದದೆ ನಿರ್ಗಮಿಸಿದಂತಾಗಿದೆ.
ಈ ಕುರಿತು ಲೋಕಭವನವು ವಿವರವಾದ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ರಾಜ್ಯಪಾಲರ ಮೈಕ್ರೊಫೋನ್ ಅನ್ನು "ಪದೇ ಪದೇ ಆಫ್" ಮಾಡಿದ ನಂತರ ಮತ್ತು ಸದನದ ಮುಂದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವರಿಗೆ ಅವಕಾಶ ನೀಡದ ಹಿನ್ನಲೆಯಲ್ಲಿ ಅವರು ವಿಧಾನಸಭೆಯಿಂದ ನಿರ್ಗಮಿಸಿರುವುದಾಗಿ ತಿಳಿಸಿದೆ.
ವಿಧಾನಸಭೆ ಅಧಿವೇಶನದ ಆರಂಭದ ದಿನದಂದು ರಾಜ್ಯಪಾಲರು ಮತ್ತು ಡಿಎಂಕೆ ನೇತೃತ್ವದ ಸರ್ಕಾರದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಘಟನೆ ಮತ್ತೆ ನಡೆದಿದೆ. ಅಲ್ಲದೇ ರಾಷ್ಟ್ರಗೀತೆ ಬದಲು ತಮಿಳು ಗೀತೆಯೊಂದಿಗೆ ಕಲಾಪ ಆರಂಭಗೊಂಡಿರುವುದಾಗಿ ವರದಿ ತಿಳಿಸಿದೆ.
ಲೋಕ ಭವನವು ಈ ಘಟನೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದ್ದು, ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾದ ರಾಜ್ಯಪಾಲರಿಗೆ ಮಾತನಾಡಲು ಅವಕಾಶ ನಿರಾಕರಿಸಿದ ನಂತರ ಹೊರ ನಡೆದಿರುವುದಾಗಿ ಹೇಳಿದೆ. ಸಿದ್ಧಪಡಿಸಿದ ಭಾಷಣದಲ್ಲಿ ತಮಿಳುನಾಡು ಸರ್ಕಾರದ ಗಂಭೀರ ಲೋಪಗಳು ಮತ್ತು ತಪ್ಪುಗಳನ್ನು ಗುರುತಿಸಲು ರಾಜ್ಯಪಾಲರು ಪ್ರಯತ್ನಿಸಿದ್ದರು ಆದರೆ ಹಾಗೆ ಮಾಡದಂತೆ ತಡೆಯಲಾಯಿತು ಎಂದು ದೂರಿದೆ.
ದೀರ್ಘಕಾಲದಿಂದ ಬಾಕಿ ಇರುವ ಖಾಲಿ ಹುದ್ದೆಗಳ ಬಗ್ಗೆ ಉಲ್ಲೇಖಿಸದಿರುವುದು, ಶಿಕ್ಷಣ ಸಂಸ್ಥೆಗಳಲ್ಲಿ ದುರುಪಯೋಗ, ಕುಸಿಯುತ್ತಿರುವ ಶಿಕ್ಷಣದ ಗುಣಮಟ್ಟ ಮತ್ತು ವರ್ಷಗಳ ಕಾಲ ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯದಿರುವುದು ನಾಗರಿಕರ ತಳಮಟ್ಟದ ಪ್ರಜಾಪ್ರಭುತ್ವದ ಸಾಂವಿಧಾನಿಕ ಹಕ್ಕನ್ನು ಕಸಿದುಕೊಂಡಿರುವ ಬಗ್ಗೆ ರಾಜ್ಯಪಾಲ ರವಿ ಅವರು ಭಾಷಣದಲ್ಲಿ ಉಲ್ಲೇಖಿಸಲು ಮುಂದಾಗಿದ್ದರು ಎಂದು ವರದಿ ವಿವರಿಸಿದೆ.
ವಿಧಾನಸಭೆಯಿಂದ ರಾಜ್ಯಪಾಲ ರವಿ ಅವರು ಹೊರ ನಡೆದ ಘಟನೆಯನ್ನು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಖಂಡಿಸಿದ್ದು, ಇಂತಹ ನಡೆಯನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯಪಾಲರು ಸಂಪ್ರದಾಯವನ್ನು ಉಲ್ಲಂಘಿಸಿದ್ದಾರೆ. ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ಗವರ್ನರ್ ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಲು ಅವಕಾಶವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 