‘ಇಂಡಿಯಾ’ ಮೈತ್ರಿಕೂಟ ವಿಸರ್ಜಿಸುವುದು ಅನಿವಾರ್ಯ: ಒಮರ್ ಅಬ್ದುಲ್ಲಾ

Dissolution of 'India' alliance is inevitable: Omar Abdullah

ಶ್ರೀನಗರ 09: ದೆಹಲಿ ವಿಧಾನಸಭಾ ಚುನಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2024ರ ಲೋಕಸಭೆ ಚುನಾವಣೆಗಾಗಿ ಮಾತ್ರ ‘ಇಂಡಿಯಾ’ ಮೈತ್ರಿಕೂಟವನ್ನು ರಚನೆ ಮಾಡಿದ್ದರೆ, ಅದನ್ನು ವಿಸರ್ಜಿಸುವುದು ಅನಿವಾರ್ಯ. ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ , ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ ಎಂದು  ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ತಿಳಿಸಿದ್ದಾರೆ.

ನನಗೆ ನೆನಪಿರುವಂತೆ ‘ಇಂಡಿಯಾ’ ಮೈತ್ರಿಕೂಟಕ್ಕೆ ಯಾವುದೇ ಕಾಲಮಿತಿ ಎಂಬುದು ಇರಲಿಲ್ಲ. ಆದರೆ, ಲೋಕಸಭೆ ಚುನಾವಣೆ ಬಳಿಕ ಇದುವರೆಗೆ ಯಾವುದೇ ಸಭೆ ನಡೆಯದಿರುವುದು ದುರದೃಷ್ಟಕರ. ಮೈತ್ರಿಕೂಟವನ್ನು ಯಾರು ಮುನ್ನಡೆಸುತ್ತಾರೆ? ಅಜೆಂಡಾ ಏನು? ಮೈತ್ರಿ ಹೇಗೆ ಮುಂದುವರಿಯುತ್ತದೆ? ನಾವು ಒಗ್ಗಟ್ಟಾಗಿ ಇರುತ್ತೇವೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ’ ಎಂದು ಅಬ್ದುಲ್ಲಾ ಬೇಸರ ಹೊರಹಾಕಿದ್ದಾರೆ.

2024ರ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ –ಕಾಂಗ್ರೆಸ್‌ ಮೈತ್ರಿಕೂಟ ಸರಳ ಬಹುಮತ ಪಡೆದಿತ್ತು.