ಹಾವೇರಿ, ಏ. 4, ಲಾಕ್‌ಡೌನ್‌ನಿಂದಾಗಿ ಜನರಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಹಾಗೂ ಜನತೆಯ ಆರೋಗ್ಯದ ದೃಷ್ಟಿಯಿಂದ ರಾಜ್ಯ ಸರ್ಕಾರ ಉಚಿತ ಹಾಲನ್ನು ವಿತರಿಸುವ ಯೋಜನೆ ಜಾರಿಗೆ ತಂದಿದ್ದು, ಕೃಷಿ ಸಚಿವ ಹಾಗೂ ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಬಿ.ಸಿ.ಪಾಟೀಲ್ ಕ್ಷೇತ್ರದ ಬಡ ಜನರಿಗೆ ಇಂದು ಹಾಲು ವಿತರಿಸಿದರು.ಈ ವೇಳೆ ಮಾತನಾಡಿದ ಸಚಿವರು, ಯಡಿಯೂರಪ್ಪ ನೇತೃತ್ವದ ಸರ್ಕಾರ ಬಡ ಜನರಿಗೆ ಹಾಲು ಒಕ್ಕೂಟದಲ್ಲಿ ಹೆಚ್ಚಿವರಿಯಾಗಿರುವ ಹಾಲನ್ನು ಉಚಿತವಾಗಿ ವಿತರಿಸುವ ದೃಢ ಸಂಕಲ್ಪ ಮಾಡಿದೆ. ಅದರಂತೆ ಕ್ಷೇತ್ರದ ನಗರದ ಬಡವರಿಗೆ ನಾಲ್ಕು ನೂರು ಲೀಟರ್ ಉಚಿತ ಹಾಲನ್ನು ವಿತರಿಸಲಾಗಿದೆ. ಅಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕರೆ ನೀಡಿದ ಅವರು, ರೈತರ ಕೃಷಿಕರ ಬಡವರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು.ಧಾರವಾಡ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ 19ಸಾವಿರ ಲೀಟರ್‌ನಷ್ಟು ಹೆಚ್ಚುವರಿ ಹಾಲು ಸಂಗ್ರಹವಾಗುತ್ತಿದೆ. ಈ ಹಾಲನ್ನು ಆಯಾ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ನಿರಾಶ್ರಿತರು, ಕೊಳಚೆ ಪ್ರದೇಶ ನಿವಾಸಿಗಳು ಮತ್ತು ಕೂಲಿ ಕಾರ್ಮಿಕರಿಗೆ ಕುಟುಂಬವೊಂದಕ್ಕೆ ಪ್ರತಿದಿನ ಒಂದು ಲೀಟರ್‌ನಂತೆ ಉಚಿತವಾಗಿ ಏಪ್ರಿಲ್ 14ರವರೆಗೆ ವಿತರಿಸಿ ಪೌಷ್ಠಿಕ ಆಹಾರ ನೀಡುವ ಮೂಲಕ ಆಹಾರ ಭದ್ರತೆ ಒದಗಿಸುವುದು ಅತಿಅವಶ್ಯವಾಗಿದೆ ಎಂದರು.ಈ ಸಂದರ್ಭದಲ್ಲಿ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ್ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು ಭಾಗಿಯಾಗಿದ್ದರು.